ಬೆಂಗಳೂರು: ನಾನು ಮಂಡ್ಯದಲ್ಲಿ ಹೈಸ್ಕೂಲ್ ಓದುವಾಗ ತರಕಾರಿ, ನಿಂಬೆಹಣ್ಣು ಮಾರುತ್ತಿದ್ದೆ. ಈಗ ರಾಜ್ಯದ ಜನರ ಆಶೀರ್ವಾದದಿಂದ ನಾಲ್ಕನೇ ಬಾರಿ ಸಿಎಂ ಆಗಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಸ್ವಾಮಿ ವಿವೇಕಾನಂದ ಜಯಂತಿ ಹಿನ್ನೆಲೆಯಲ್ಲಿ ಭಾನುವಾರ ಉನ್ನತ ಶಿಕ್ಷಣ ಇಲಾಖೆ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಆತ್ಮವಿಶ್ವಾಸ, ಛಲ, ಸಂಕಲ್ಪವಿದ್ದರೆ ಯಾರು ಏನನ್ನಾದರೂ ಸಾಧಿಸಬಹುದು ಎಂದರು.
ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ ಬಳಿಕ ಮಾತನಾಡಿದ ಯಡಿಯೂರಪ್ಪ, ವಿವೇಕಾನಂದರ ಹೆಸರೇ ಒಂದು ಸ್ಪೂರ್ತಿ. ಶಕ್ತಿಶಾಲಿ, ಶ್ರದ್ಧಾವಂತರಾಗಿ ವಿಚಾರಗಳನ್ನು ತಿಳಿಸಿದವರು ಸ್ವಾಮಿ ವಿವೇಕಾನಂದರು ಎಂದು ಸ್ಮರಿಸಿದರು.
ಇದೇ ವೇಳೆ ಯುವ ಸಬಲೀಕರಣ ಕೇಂದ್ರಗಳನ್ನು ಸಿಎಂ ಉದ್ಘಾಟಿಸಿದರು. ಭಾರತ ಮಹಿಳಾ ಕ್ರಿಕೆಟ್ ತಂಡದ ಮಹಿಳಾ ಆಟಗಾರ್ತಿ ವೇದಾ ಕೃಷ್ಣಮೂರ್ತಿ, ಬೌನ್ಸ್ ಸಿಇಓ ವಿವೇಕಾನಂದ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಹೈಸ್ಕೂಲ್ ದಿನಗಳಲ್ಲಿ ತರಕಾರಿ ಮಾರುತ್ತಿದ್ದೆ; ಯಡಿಯೂರಪ್ಪ
Follow Us