ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಖುಷಿ ಕೊಡುವ ಸುದ್ದಿ ಇದು.
ಹೊಸ ವರ್ಷದ ಕೊಡುಗೆ ಎಂಬಂತೆ ಜನವರಿ 1ರಿಂದ ಮಧ್ಯರಾತ್ರಿ 12 ರವರೆಗೂ ಮೆಟ್ರೋ ಸೇವೆ ಲಭ್ಯವಾಗಲಿದೆ.
ಪ್ರಯಾಣಿಕರ ಬೇಡಿಕೆ ಆಧರಿಸಿ ಮೆಟ್ರೋ ಸಾರಿಗೆ ಸೇವೆಯನ್ನು ವಿಸ್ತರಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ತಿಳಿಸಿದ್ದಾರೆ. ಈ ನಿರ್ಧಾರದಿಂದ ಪ್ರಯಾಣಿಕರಿಗೆ ಒಂದು ಗಂಟೆ ಹೆಚ್ಚುವರಿ ಸೇವೆ ಸಿಗಲಿದೆ. ಪ್ರಸ್ತುತ ರಾತ್ರಿ 11 ರವರೆಗೆ ಕಾರ್ಯನಿರ್ವಹಿಸುತ್ತಿದೆ.
ಈ ಮೂಲಕ ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿ. (ಬಿಎಂಆರ್‌ಸಿಎಲ್) ಪ್ರಯಾಣಿಕರ ಬೇಡಿಕೆಯನ್ನು ಈಡೇರಿಸಿದೆ.
ಹೊಸ ವರ್ಷದಿಂದ ರಾತ್ರಿ 12ರವರೆಗೂ ಮೆಟ್ರೋ ಸೇವೆ
Follow Us