ಬೆಂಗಳೂರು; ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆ 7 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಜೊತೆಗೆ, ಎಲ್ಲಾ ಪ್ರಮುಖ ಬೀದಿಗಳಲ್ಲಿ ಸಿಸಿ ಟಿವಿ ಹಾಗೂ ಡ್ರೋನ್ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ರೆಸ್ಟೋರೆಂಟ್ ಗಳು, ಪಬ್ ಹಾಗೂ ಬಾರ್ ಗಳು ಮಧ್ಯರಾತ್ರಿ 2 ಗಂಟೆಯವರೆಗೆ ತೆರೆದಿರಲಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.