Friday, January 21, 2022

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

Follow Us

newsics.com

ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಮೀನು ಸಾಗಾಟದ ವಾಹನದ ಚಾಲಕ ಸುರೇಶ್ ಮರಕಾಲ(40) ಮೃತಪಟ್ಟಿದ್ದಾರೆ. ಸಹ ಸವಾರ ರಾಜು ಮರಕಾಲ(60) ಹಾಗೂ ಬೈಕ್ ಸವಾರ ಸುಬ್ರಹ್ಮಣ್ಯ ಕುಲಾಲ್(42) ಎಂಬವರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಲ್ಪೆಯಿಂದ ಮೀನು ಖರೀದಿಸಿ ಮಿನಿ ಪಿಕಪ್ ವಾಹನದಲ್ಲಿ ತೆರಳುತ್ತಿದ್ದಾಗ, ಸ್ವಿಫ್ಟ್ ಕಾರ್ ಅತೀವೇಗದಲ್ಲಿ ಬಂದು ಬೈಕ್ ಮತ್ತು ಮಿನಿ ಪಿಕಪ್ ಗೆ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಮತ್ತು ಮಿನಿ ಪಿಕಪ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

 

ಮತ್ತಷ್ಟು ಸುದ್ದಿಗಳು

Latest News

ಜೀವಂತ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ

newsics.com ಮೈಸೂರು: ಮೆದುಳು ನಿಷ್ಕ್ರಿಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ ಮಾಡಲಾಗಿದೆ. ಜನವರಿ 18ರಂದು ರಸ್ತೆ ಅಪಘಾತದಿಂದ ದರ್ಶನ್(24) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು....

ಒಂದೇ ಮೊಬೈಲ್ ಸಂಖ್ಯೆಯಿಂದ ಇನ್ನುಮುಂದೆ ಆರು ಮಂದಿ ಕೋವಿಡ್ ಲಸಿಕೆ ನೋಂದಾಯಿಸಬಹುದು

newsics.com ನವದೆಹಲಿ: ಕೋವಿಡ್ ಲಸಿಕೆಯನ್ನು ಹಾಕಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು  ತಿಳಿಸಿದೆ. ಮೊದಲು ಒಂದು ಮೊಬೈಲ್ ಸಂಖ್ಯೆಯ ಮೂಲಕ  ನಾಲ್ಕು...

ಪಾಕಿಸ್ತಾನದ 35 ಯೂಟ್ಯೂಬ್‌ ಚಾನೆಲ್‌ ಬ್ಲಾಕ್‌

newsics.com ನವದೆಹಲಿ: ಭಾರತ ವಿರೋಧಿ ಸುಳ್ಳು ಸುದ್ದಿಗಳನ್ನು ಹರಡಿದ ಆರೋಪದ ಮೇಲೆ ಪಾಕ್‌ನ 35 ಯೂಟ್ಯೂಬ್‌ ಚಾನೆಲ್‌, ಎರಡು ಟ್ವಿಟ್ಟರ್‌ ಖಾತೆ, ಎರಡು ಇನ್‌ಸ್ಟಾಗ್ರಾಮ್‌ ಖಾತೆ, ಎರಡು ವೆಬ್‌ಸೈಟ್‌ ಮತ್ತು ಫೇಸ್‌ಬುಕ್‌ ಖಾತೆಗಳನ್ನು ಮಾಹಿತಿ ಮತ್ತು...
- Advertisement -
error: Content is protected !!