Monday, April 12, 2021

ರಾಜ್ಯದಲ್ಲಿ ಕೊರೋನಾಗೆ 10 ಮಂದಿ ಬಲಿ, 337 ಜನರಿಗೆ ಸೋಂಕು

ಬೆಂಗಳೂರು: ಬೆಂಗಳೂರಿನ ಏಳು ಮಂದಿ ಸೇರಿ ರಾಜ್ಯದಲ್ಲಿ ಶುಕ್ರವಾರ 10 ಜನ ಬಲಿಯಾಗಿದ್ದು, ಬಲಿಯಾದವರ ಸಂಖ್ಯೆ 124 ಕ್ಕೇರಿದೆ.
ಬೆಂಗಳೂರಲ್ಲಿ 132 ಸೋಂಕಿತರು ಸೇರಿ ರಾಜ್ಯದಲ್ಲಿ ಶುಕ್ರವಾರ 337 ಮಂದಿಗೆ ಸೋಂಕು ತಗುಲಿದೆ. ಬೆಂಗಳೂರು ನಗರ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 982ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8281 ಕ್ಕೇರಿದೆ. ರಾಜ್ಯದಲ್ಲಿ ಈವರೆಗೆ 5210 ಸೋಂಕಿತರು ಗುಣಮುಖರಾಗಿದ್ದು, 2943 ಜನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.
ರಾಜ್ಯದಲ್ಲಿ ಶುಕ್ರವಾರ 230 ಜನರು ಗುಣಮುಖರಾಗಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಅತೀ ಹೆಚ್ಚು ಅಂದರೆ 61 ಜನರು ಇಂದು ಸೋಂಕಿನಿಂದ ಗುಣಮುಖರಾಗಿದ್ದಾರೆ. ಬೆಂಗಳೂರು ನಗರದಲ್ಲಿಂದು ಸೋಂಕು ಸ್ಪೋಟವೇ ಸಂಭವಿಸಿದೆ. ನಗರದಲ್ಲಿಂದು 138 ಜನರಿಗೆ ಸೋಂಕು ತಾಗಿರುವುದು ದೃಢವಾಗಿದೆ. ನಾಲ್ವರು ಸೋಂಕಿತರು ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ. ಶುಕ್ರವಾರ ಪತ್ತೆಯಾದ 337 ಪ್ರಕರಣಗಳಲ್ಲಿ 93 ಮಂದಿ ಅಂತಾರಾಜ್ಯ ಪ್ರಯಾಣಿಕರಾಗಿದ್ದು 11 ಮಂದಿ ಅಂತಾರಾಷ್ಟ್ರೀಯ ಪ್ರಯಾಣಿಕರಾಗಿರುತ್ತಾರೆ. 2943 ಸೋಂಕಿತರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಐಸಿಯುನಲ್ಲಿ 78 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!