Tuesday, April 13, 2021

ರಾಜ್ಯದಲ್ಲಿ ಮತ್ತೆ 10 ಕೊರೋನಾ ಪ್ರಕರಣ

ಬೆಂಗಳೂರು:  ರಾಜ್ಯದಲ್ಲಿ ಹೊಸದಾಗಿ 10 ಕೊರೋನಾ ಪ್ರಕರಣ ವರದಿಯಾಗಿದೆ. ಇದರೊಂದಿಗೆ  ಕೊರೋನಾ ಸೋಂಕಿತರ ಸಂಖ್ಯೆ 858ಕ್ಕೆ ತಲುಪಿದೆ. ಕೊರೋನಾ ರಾಜ್ಯದಲ್ಲಿ 31 ಮಂದಿಯನ್ನು ಬಲಿಪಡೆದುಕೊಂಡಿದೆ.   ಬಾಗಲಕೋಟೆಯಲ್ಲಿ ಎರಡು,  ವಿಜಯಪುರದಲ್ಲಿ ಒಂದು ಬೀದರ್ ನಲ್ಲಿ ಹೊಸದಾಗಿ ಎರಡು ಕೊರೋನಾ ಪ್ರಕರಣ ದೃಢಪಟ್ಟಿದೆ. ದಾವಣಗೆರೆ ಜಿಲ್ಲೆಯಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿದ್ದು ಮತ್ತೆ ಮೂವರಲ್ಲಿ ಸೋಂಕಿನ ಲಕ್ಷಣ ಕಂಡು ಬಂದಿದೆ. ಕಲಬುರ್ಗಿಯಲ್ಲಿ  ಹೊಸದಾಗಿ ಒಂದು ಪ್ರಕರಣ ದೃಢಪಟ್ಟಿದೆ. ಇದೇ ವೇಳೆ ಲಂಡನ್ ನಿಂದ ಏರ್ ಇಂಡಿಯಯಾ ವಿಮಾನ ಮೂಲಕ   ಬೆಂಗಳೂರಿಗೆ  ಆಗಮಿಸಿದ ಎಲ್ಲ ಪ್ರಯಾಣಿಕರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ.  ಯಾರಲ್ಲಿಯೂ ಕೂಡ ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದಿಲ್ಲ. ಎಲ್ಲ ಪ್ರಯಾಣಿಕರನ್ನು ಕ್ವಾರಂಟೈನ್  ಮಾಡಲಾಗಿದೆ

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!