ಬೆಂಗಳೂರು: ಮಾರಕ ಕೊರೋನಾ ನಿಯಂತ್ರಿಸುವ ಸಂಬಂಧ ಮಾಸ್ಕ್ ಧರಿಸದಿದ್ದವರ ಮೇಲೆ ಭಾರೀ ದಂಡ ವಿಧಿಸುವ ಆದೇಶ ಜಾರಿಗೆ ಬಂದಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 1000 ರೂಪಾಯಿ ದಂಡ ವಿಧಿಸಲು ತೀರ್ಮಾನಿಸಲಾಗಿದೆ. ಈ ಹಿಂದೆ ದಂಡದ ಪ್ರಮಾಣ 200 ರೂಪಾಯಿ ಆಗಿತ್ತು.
ಬೆಂಗಳೂರು ಮಹಾನಗರದಲ್ಲಿ ಮಾಸ್ಕ್ ಧರಿಸದಿದ್ದವರು 1000 ರೂಪಾಯಿ ದಂಡ ಪಾವತಿಸಬೇಕಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ದಂಡದ ಪ್ರಮಾಣ 500 ರೂಪಾಯಿ ಎಂದು ನಿಗದಿಪಡಿಸಲಾಗಿದೆ. ಜನರಲ್ಲಿ ಜಾಗೃತಿ ಮೂಡಿಸುವುದೇ ದಂಡ ಹೆಚ್ಚಳಕ್ಕೆ ಮುಖ್ಯ ಕಾರಣ ಎಂದು ಸರ್ಕಾರ ಹೇಳಿದೆ.
ಇದೇ ವೇಳೆ ಕೆಲವು ಭ್ರಷ್ಟ ಅಧಿಕಾರಿಗಳು ಇದರಿಂದ ತಮ್ಮ ಕಿಸೆ ತುಂಬಿಸಿಕೊಳ್ಳಲಿದ್ದಾರೆ ಎಂಬ ಮಾತು ಕೂಡ ಕೇಳಿ ಬಂದಿದೆ