newsics.com
ಬೆಂಗಳೂರು; ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 1,019 ಮಂದಿಗೆ ಹೊಸದಾಗಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಸೋಂಕಿತರ ಸಂಖ್ಯೆ 40,21,106 ಏರಿಕೆಯಾಗಿದೆ.
ಕೊರೋನಾ ಸೋಂಕಿನಿಂದ ಇಂದು 3 ದಿನ ಮೃತಪಟ್ಟಿದ್ದು, ಮೃತರ ಸಂಖ್ಯೆ 40,121ಕ್ಕೆ ತಲುಪಿದೆ.
24 ಗಂಟೆಗಳಲ್ಲಿ 1,662 ಮಂದಿ ಗುಣಮುಖರಾಗಿದ್ದು, ಚೇತರಿಸಿಕೊಂಡವರ ಸಂಖ್ಯೆ 39,69,691 ಕ್ಕೆತಲುಪಿದೆ. ಇನ್ನು 11,252 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ 655 ಜನರಿಗೆ ಸೋಂಕು ಕಾಣಿಸಿಕೊಂಡಿದ್ದು, ಓರ್ವರು ಮೃತಪಟ್ಟಿದ್ದಾರೆ. ಧಾರವಾಡ ಮತ್ತು ಬಳ್ಳಾರಿಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.