Wednesday, November 30, 2022

ಒಂದೇ ಕುಟುಂಬದ 11 ಜನರಿಗೆ ಕೊರೋನಾ ಸೋಂಕು, ಗ್ರಾಮಸ್ಥರಲ್ಲಿ ಆತಂಕ

Follow Us

newsics.com

ಕೆರೂರ: ರಾಜ್ಯದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿದೆ. ಇದಕ್ಕೆ ಕೆರೂರ ಕೂಡ ಹೊರತಾಗಿಲ್ಲ.

ಇಲ್ಲಿಗೆ ಸಮೀಪದ ನೀರಬೂದಿಹಾಳ ಗ್ರಾಮದಲ್ಲಿ ಒಂದೇ ಕುಟಂಬದ 11 ಮಂದಿಯಲ್ಲಿ ಕೊರೋನಾ ಸೋಂಕು ಕಂಡು ಬಂದಿದೆ. ಮಕ್ಕಳು ಕೂಡ ಇದರಲ್ಲಿ ಸೇರಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ಸಂಬಂಧಿಯೊಬ್ಬರ ಅಂತ್ಯಕ್ರಿಯೆಯಲ್ಲಿ ಮನೆಯ ಕೆಲವು ಸದಸ್ಯರು ಪಾಲ್ಗೊಂಡಿದ್ದರು. ಬಳಿಕ ಕೊರೋನಾ ಸೋಂಕು ಮನೆಯ ಎಲ್ಲ ಸದಸ್ಯರಲ್ಲಿ ಕಾಣಿಸಿಕೊಂಡಿದೆ. ಇದು ಆತಂಕ ಸೃಷ್ಟಿಸಿದೆ.

ಕಂದಾಯ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಮುಂಜಾಗ್ರತೆ ವಹಿಸಿಕೊಳ್ಳಲು ಸೂಚಿಸಿದ್ದಾರೆ.

ಚೇತರಿಕೆ ಕಾಣದ ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!