Saturday, April 17, 2021

ಬೆಂಗಳೂರನಲ್ಲಿ ಒಂದೇ ದಿನ 1148, ರಾಜ್ಯದಲ್ಲಿ 2062 ಮಂದಿಗೆ ಸೋಂಕು, 54 ಜನ ಬಲಿ

ಬೆಂಗಳೂರು: ರಾಜ್ಯದಲ್ಲಿ ಬುಧವಾರ ಒಂದೇ ದಿನ 2062 ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗಿನ ದಾಖಲೆ ಹಿಂದಿಕ್ಕಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 28877 ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಬುಧವಾರ ಒಂದೇ ದಿನ 1148 ಸೋಂಕಿತರು ಪತ್ತೆಯಾಗಿದ್ದಾರೆ. ನಗರದಲ್ಲಿ ಸೋಂಕಿತರ ಸಂಖ್ಯೆ 12509 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 13 ಜನ ಸೇರಿದಂತೆ ರಾಜ್ಯದಲ್ಲಿ ಬುಧವಾರ ಒಂದೇ ದಿನ 54 ಜನ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ. ಇದು ಕೊರೋನಾ ಪ್ರಾರಂಭವಾದಂದಿನಿಂದ ರಾಜ್ಯದಲ್ಲಿ ಒಂದೇ ದಿನ ಸಂಭವಿಸಿದ ಸಾವಿನ ಪ್ರಮಾಣದ ಅತಿ ದೊಡ್ಡ ಸಂಖ್ಯೆಯಾಗಿದೆ. ಕೊರೋನಾದಿಂದ ಸಾವಿನ ಪ್ರಮಾಣ ರಾಜ್ಯದಲ್ಲಿ 1.3ರಷ್ಟಿದ್ದು, ಬೆಂಗಳೂರಿನಲ್ಲಿ 1.34ರಷ್ಟಿದೆ. ರಾಜ್ಯಾದ್ಯಂತ ಇದುವರೆಗೂ ದಾಖಲಾದ ಒಟ್ಟು ಪ್ರಕರಣಗಳ ಸಂಖ್ಯೆ 28,877 ತಲುಪಿದೆ. ಒಟ್ಟಾರೆ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 470ಕ್ಕೆ ಏರಿಕೆಯಾಗಿದೆ. ಬುಧವಾರ 778 ಗುಣಮುಖರಾಗಿದ್ದು, ಈ ಮೂಲಕ ಈವರೆಗೆ 11876 ಕೊರೋನಾದಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲೀಗ 16527 ಸಕ್ರಿಯ ಪ್ರಕರಣಗಳಿವೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 1148 ಪ್ರಕರಣಗಳು ವರದಿಯಾಗಿದ್ದರೆ ಒಟ್ಟು ಸಂಖ್ಯೆ 12,509ಕ್ಕೆ ಏರಿಕೆಯಾಗಿದೆ. ಅಲ್ಲದೆ ದಕ್ಷಿಣ ಕನ್ನಡ 183, ಧಾರವಾಡ 89, ಕಲಬುರಗಿ 66, ಬಳ್ಳಾರಿ 59 ಹಾಗೂ ಮೈಸೂರು ಜಿಲ್ಲೆಯಲ್ಲಿ 59 ಜನರಿಗೆ ಕೊರೋನಾ ದೃಢವಾಗಿದೆ. ಚಾಮರಾಜನಗರ, ಕೊಡಗು ಜಿಲ್ಲೆಯಲ್ಲಿ ಸೋಂಕು ಪ್ರಕರಣಗಳು ಇಂದು ವರದಿಯಾಗಿಲ್ಲ.

ಮತ್ತಷ್ಟು ಸುದ್ದಿಗಳು

Latest News

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್...

ಪ್ರಧಾನಿ ಮೋದಿ ಮನವಿ: ಕುಂಭಮೇಳ ಅಂತ್ಯ

newsics.com ಹರಿದ್ವಾರ: ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಿದ ಹಿನ್ನೆಲೆಯಲ್ಲಿ ಹರಿದ್ವಾರದ ಕುಂಭಮೇಳವನ್ನು ಮೊಟಕುಗೊಳಿಸಲಾಗಿದೆ. ಈ ಕುರಿತು ಜುನಾ ಅಖಾಡದ ಸ್ವಾಮಿ ಅವಧೇಶಾನಂದ ಗಿರಿ ಅವರು ಶನಿವಾರ (ಏ.17) ಸಂಜೆ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕುಂಭಮೇಳ...

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  11,41,998  ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ ಹೊಸದಾಗಿ 11,...
- Advertisement -
error: Content is protected !!