Saturday, April 17, 2021

ರಾಜ್ಯದಲ್ಲಿಂದು 12 ಕೊರೋನಾ ಪ್ರಕರಣ ಪತ್ತೆ, ಓರ್ವ ಮಹಿಳೆ ಸಾವು

ಬೆಂಗಳೂರು: ರಾಜ್ಯದಲ್ಲಿ ಗುರುವಾರ ಹೊಸದಾಗಿ 12 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆಯಾಗಿದೆ.
ಈ ನಡುವೆ ದಾವಣಗೆರೆಯ 55 ವರ್ಷದ ಮಹಿಳೆಯೋರ್ವರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಈವರೆಗೆ 30 ಮಂದಿ ಸಾವನ್ನಪ್ಪಿದ್ದರೆ, 366 ಮಂದಿ ಗುಣಮುಖರಾಗಿದ್ದಾರೆ.
ಗುರುವಾರ ಬೆಳಗ್ಗೆ 8 ಪ್ರಕರಣಗಳು ಪತ್ತೆಯಾಗಿದ್ದವು. ಸಂಜೆ ವೇಳೆಗೆ ಹೊಸದಾಗಿ 4 ಪ್ರಕರಣಗಳು ಪತ್ತೆಯಾಗಿದ್ದು ಬಾಗಲಕೋಟೆಯಲ್ಲಿ 3 ಮತ್ತು ಧಾರವಾಡದಲ್ಲಿ 1 ಪ್ರಕರಣ ಪತ್ತೆಯಾಗಿದೆ.
ಬಾಗಲಕೋಟೆಯ ಬಾದಾಮಿಯ ಗರ್ಭಿಣಿ ಮಹಿಳೆಯ ಸೋಂಕಿನಿಂದ ಮತ್ತೆ ಮೂವರಿಗೆ ಸೋಂಕು ತಗುಲಿದೆ. ಒಂದೇ ಗ್ರಾಮದ 80 ವರ್ಷದ ವೃದ್ಧೆ, 55 ವರ್ಷದ ಮಹಿಳೆ ಮತ್ತು 19 ವರ್ಷದ ಯುವತಿಗೆ ಸೋಂಕು ದೃಢಪಟ್ಟಿದೆ. ಧಾರವಾಡದ 35 ವರ್ಷದ ವ್ಯಕ್ತಿಗೆ ಕೂಡ ಸೋಂಕು ತಗಲಿದೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!