Tuesday, April 13, 2021

ಹಳ್ಳದ ನೀರಲ್ಲಿ ವಿಷ ಬೆರೆಸಿ 12 ಹಸುಗಳ ಹತ್ಯೆ, 50 ಹಸುಗಳ ಸ್ಥಿತಿ ಗಂಭೀರ


ಚಾಮರಾಜನಗರ: ಕೇರಳದಲ್ಲಿ ಸ್ಫೋಟಕವಿತ್ತು ಆನೆ ಹತ್ಯೆಗೈದ ಘಟನೆ ಎಲ್ಲೆಡೆ ಭಾರೀ ಸುದ್ದಿಯಾಯಿತು. ಇದೀಗ ಇಲ್ಲೇ, ನಮ್ಮ ಹತ್ತಿರದಲ್ಲೇ 12 ಹಸುಗಳನ್ನು ಕೊಂದ ಅಮಾನವೀಯ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಬೆಳೆ ಹಾಳು ಮಾಡುತ್ತವೆ ಎಂದು ನೀರಿಗೆ ವಿಷ ಬೆರೆಸಿ 12 ಹಸುಗಳನ್ನು ಕೊಂದಿರುವ ಅಮಾನವೀಯ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಹುತ್ತೂರು ಗ್ರಾಮದಲ್ಲಿ ನಡೆದಿದೆ. ವಿಷಮಿಶ್ರಿತ ನೀರು ಕುಡಿದ 12 ಹಸುಗಳು ಅಸುನೀಗಿದ್ದರೆ, 50ಕ್ಕೂ ಹೆಚ್ಚು ಹಸುಗಳ ಸ್ಥಿತಿ ಚಿಂತಾಜನಕವಾಗಿದೆ.
ಹುತ್ತೂರಿನ ಸುತ್ತಲಿನ ತೋಟಗಳಿಗೆ ಹಸುಗಳು ಬೆಳೆ ತಿಂದು ಹಾಳು ಮಾಡುತ್ತವೆ ಎಂದು ಹಸುಗಳನ್ನೇ ಕೊಲ್ಲಲು ಕೆಲವು ತೋಟದ ಮಾಲೀಕರು ಯೋಚಿಸಿ ಗ್ರಾಮದ ಹೊರವಲಯದಲ್ಲಿನ ಹಳ್ಳವೊಂದರಲ್ಲಿ ನಿಂತಿದ್ದ ನೀರಿಗೆ ವಿಷ ಬೆರೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇಯಲು ಹೋಗಿದ್ದ ಹಸುಗಳು ಎಂದಿನಂತೆ ಸಂಜೆ ಗ್ರಾಮಕ್ಕೆ ವಾಪಸ್ ಬರುವಾಗ ಹಳ್ಳದಲ್ಲಿನ ನೀರು ಕುಡಿದಿವೆ. ನಂತರ ಮನೆಗಳಿಗೆ ಬರುವಷ್ಟರಲ್ಲಿ ದಾರಿ ಮಧ್ಯದಲ್ಲೇ 12ಕ್ಕೂ ಹೆಚ್ಚು ಹಸುಗಳು ಕುಸಿದುಬಿದ್ದು ಸಾವನ್ನಪ್ಪಿವೆ. ಹಲವು ಹಸುಗಳು ಅಸ್ವಸ್ಥಗೊಂಡಿವೆ. ಒಡೆಯರಪಾಳ್ಯದ ಪಶುವೈದ್ಯಾಧಿಕಾರಿಗಳು ಭೇಟಿ ನೀಡಿ ಅಸ್ವಸ್ಥಗೊಂಡಿರುವ ಹಸುಗಳಿಗೆ ಚಿಕಿತ್ಸೆ ನೀಡಿದ್ದಾರೆ. ಆದರೆ ಬಹುತೇಕ ಹಸುಗಳು ಬದುಕುಳಿಯುವುದು ಕಷ್ಟ ಎನ್ನಲಾಗಿದೆ. ವಿಷ ಬೆರೆಸಿದ ನೀರು ಕುಡಿದಿರುವುದರಿಂದಲೇ ಹಸುಗಳು ಸಾವನ್ನಪ್ಪಿವೆ ಎಂದು ರೈತರು ಆರೋಪಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!