Thursday, May 26, 2022

ನೇತಾಜಿ ಸುಭಾಷ್ 125ನೇ ಜನ್ಮದಿನ: ಅರ್ಥಫೂರ್ಣ ಆಚರಣೆಗೆ ಸರ್ಕಾರ ನಿರ್ಧಾರ

Follow Us

newsics.com
ಬೆಂಗಳೂರು: ಅಪ್ರತಿಮ ದೇಶ ಭಕ್ತ, ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ಶಾಲೆ ಮತ್ತು ಕಾಲೇಜುಗಳಲ್ಲಿ ವರ್ಷವಿಡೀ ಸುಭಾಷ್ ಚಂದ್ರ ಬೋಸ್ ಅವರ ಕುರಿತಾದ ಕಾರ್ಯಕ್ರಮಗಳನ್ನು ಆಚರಣೆ ಮಾಡಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ವಿಶೇಷವಾದ ಹಾಗೂ ಅರ್ಥಪೂರ್ಣ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.

ಮಂಗಳವಾರ ಬೆಂಗಳೂರಿನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿ (ಜ.18) ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ವರ್ಚುವಲ್ ಮೂಲಕ ನಡೆಸಿದ ಸಭೆಯ ಬಳಿಕ ಸಿಎಂ ಈ ವಿಷಯ ತಿಳಿಸಿದರು.

ಬೆಂಗಳೂರಿನ ಜಕ್ಕೂರಿನ ವೈಮಾನಿಕ ತರಬೇತಿ ಶಾಲೆಯ ಆವರಣದಲ್ಲಿ ಸುಭಾಷ್ ಚಂದ್ರ ಬೋಸ್‌ರವರ 125ನೇ ಜನ್ಮ ದಿನಾಚರಣೆಯನ್ನು ಮಾಡಲು ನಿರ್ಧರಿಸಲಾಗಿದೆ. ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ನಿರ್ಧರಿಸಲಾಗಿದೆ.

ಗಣರಾಜ್ಯೋತ್ಸವವು ಜ.24ರ ಬದಲಿಗೆ ಜನವರಿ 23ರಿಂದ ಪ್ರಾರಂಭವಾಗಲಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.

ಪಿಯುಸಿ ಪರೀಕ್ಷೆ: ತಾತ್ಕಾಲಿಕ‌ ವೇಳಾಪಟ್ಟಿ ಪ್ರಕಟ

ಕಾರು‌ ಕೆರೆಗೆ ಉರುಳಿ ಒಂದೇ‌ ಕುಟುಂಬದ ನಾಲ್ಚರ ಸಾವು

ಆತ್ಮಗಳ ಜೊತೆ ಮಾತಾಡುತ್ತೇನೆಂದು ಕಾಣೆಯಾಗಿದ್ದ ಬಾಲಕಿ ಪತ್ತೆ

ಕೋವಿಡ್’ನಿಂದ ವೃದ್ಧರ ಮೆದುಳಿಗೆ ಹೆಚ್ಚು ಅಪಾಯ:ಅಧ್ಯಯನ ವರದಿ

6 ಅಡಿ ಉದ್ದದ ಹೆಬ್ಬಾವು ನುಂಗಿದ 11 ಅಡಿಯ ಕಾಳಿಂಗ ಸರ್ಪ!

4 ಕಾಲು, 4 ಕೈಗಳಿರುವ ವಿಚಿತ್ರ ಮಗು ಜನನ!

ಇದು ಸ್ಪೆಷಲ್ ಐಸ್’ಕ್ರೀಮ್ ಮಸಾಲಾ ದೋಸೆ: ವೀಡಿಯೋ ವೈರಲ್!

ಮತ್ತಷ್ಟು ಸುದ್ದಿಗಳು

Latest News

ಪಾಟಿದಾರ್ ಶತಕದಾಟ: ಕ್ವಾಲಿಫೈಯರ್ 2 ತಲುಪಿದ ಫಾಫ್ ಪಡೆ

newsics.com ಕೋಲ್ಕತ್ತಾ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14ರನ್‌ಗಳ ಗೆಲುವು ಸಾಧಿಸಿದೆ. ಮಳೆಯ ಕಾರಣದಿಂದಾಗಿ ಕೊಂಚ ತಡವಾಗಿ...

ಉಗ್ರರ ಗುಂಡಿಗೆ ಟಿವಿ‌ ಕಲಾವಿದೆ ಬಲಿ

newsics.com ಶ್ರೀನಗರ: ಉಗ್ರರ ಗುಂಡಿಗೆ ಟಿವಿ ಕಲಾವಿದೆಯೊಬ್ಬರು ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಕಲಾವಿದೆ ಅಮ್ರೀನ್‌ ಭಟ್‌ ಎಂದು ಗುರುತಿಸಲಾಗಿದೆ. ಅಮ್ರೀನ್...

ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ

newsics.com ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ. ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್...
- Advertisement -
error: Content is protected !!