Monday, April 12, 2021

ಬೆಂಗಳೂರಲ್ಲಿ ಮತ್ತೆ 1 ತಿಂಗಳು ಕಾಲ ನಿಷೇಧಾಜ್ಞೆ

ಬೆಂಗಳೂರು: ಕೊರೋನಾ ಸೋಂಕು ಹರಡುವಿಕೆ ತಡೆಗಟ್ಟಲು ನಗರದಲ್ಲಿ ಮತ್ತೆ ಒಂದು ತಿಂಗಳ ಕಾಲ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಮುಂದುವರಿಸಲಾಗಿದೆ.
ಜುಲೈ 26 ರವರೆಗೆ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ. ನಗರದಲ್ಲಿ ಕೋವಿಡ್ 19 ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಮತ್ತಷ್ಟು ಕಟ್ಟುನಿಟ್ಟಾಗಿ ಕ್ರಮಗಳನ್ನು ಜಾರಿಗೊಳಿಸುವುದಾಗಿ ತಿಳಿಸಿದ್ದಾರೆ. ರಾತ್ರಿ ಎಂಟರಿಂದ ಬೆಳಗ್ಗೆ ಐದರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಈ ವೇಳೆ ಮನೆಯಿಂದ ಹೊರಬಂದರೆ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!