Monday, October 3, 2022

ಕ್ರಿಕೆಟರ್ ರಾಜೇಶ್ವರಿಗೆ 15 ಲಕ್ಷ ರೂ. ಬಹುಮಾನ ಘೋಷಿಸಿದ ರಾಜ್ಯ ಸರ್ಕಾರ

Follow Us

newsics.com

ಬರ್ಮಿಂಗ್ಹ್ಯಾಮ್: ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಮಹಿಳಾ ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದ ಕರ್ನಾಟಕದ ರಾಜೇಶ್ವರಿ ಗಾಯಕ್ವಾಡ್ ಅವರಿಗೆ ರಾಜ್ಯ ಸರ್ಕಾರದಿಂದ 15 ಲಕ್ಷ ರೂ. ನಗದು ಬಹುಮಾನ ನೀಡುವುದಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಘೋಷಿಸಿದ್ದಾರೆ.

ಮಹಿಳೆಯರ ಕ್ರಿಕೆಟ್ ವಿಭಾಗದಲ್ಲಿ ಬೆಳ್ಳಿ ಪದಕ ಸಾಧನೆಗೈದ ಭಾರತ ತಂಡವನ್ನು ಇದೇ ವೇಳೆ ಡಾ. ನಾರಾಯಣಗೌಡ ಅಭಿನಂದಿಸಿದ್ದಾರೆ. ರಾಜ್ಯ ಸರ್ಕಾರದಿಂದ 15 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.
ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಅದ್ಭುತ ಹೋರಾಟವನ್ನು ಪ್ರದರ್ಶಿಸಿದರೂ ಸಣ್ಣ ಅಂತರದಿಂದ ಬಂಗಾರದ ಪದಕ ಕೈತಪ್ಪಿದೆ.

22 ಚಿನ್ನ, 16 ಬೆಳ್ಳಿ ಮತ್ತು 23 ಕಂಚು ಸೇರಿದಂತೆ ಒಟ್ಟಾರೆ 61 ಪದಕಗಳೊಂದಿಗೆ ಭಾರತವು 2022ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ವೇದಿಕೆಯಲ್ಲಿ 4 ನೇ ಸ್ಥಾನವನ್ನು ಪಡೆದುಕೊಂಡಿದೆ. ಭಾರತದ ಕ್ರೀಡಾಪಟುಗಳ ಅಮೋಘ ಸಾಧನೆಯು ಭಾರತಕ್ಕೆ 2022ರ ಕಾಮನ್‌ ವೆಲ್ತ್‌ ಕ್ರೀಡಾಕೂಟದಲ್ಲಿ ನಾಲ್ಕನೇ ಸ್ಥಾನವನ್ನು ದಕ್ಕಿಸಿಕೊಟ್ಟಿದೆ.

ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ಗೆ ಕೊಲೆ ಬೆದರಿಕೆ

ಬಿಗ್‌ಬಾಸ್ ಮನೇಲಿ ತಲೆ, ಮೀಸೆ ಬೋಳಿಸಿಕೊಂಡ ಆರ್ಯವರ್ಧನ್!

ಕಾಮನ್ ವೆಲ್ತ್ ಗೇಮ್ಸ್ ಅಂತ್ಯ ; 61 ಪದಕ ಗೆದ್ದ ಭಾರತಕ್ಕೆ 4ನೇ ಸ್ಥಾನ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!