Saturday, April 17, 2021

ಬೀದರ್’ನಲ್ಲಿ ಒಂದೇ ಕುಟುಂಬದ 16 ಮಂದಿಗೆ ಸೋಂಕು!

ಬೀದರ್: ಗಡಿ ಜಿಲ್ಲೆ ಬೀದರ್‌ನಲ್ಲಿ ಒಂದೇ ದಿನ 73 ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ ಒಂದೇ ಕುಟುಂಬದ 16 ಜನ ಸೇರಿದ್ದಾರೆ.
ಬೀದರ್ ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಒಂದೇ ಕುಟುಂಬದ 16 ಜನರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಮನೆಯ ಯಜಮಾನ, ಆತನ ಪತ್ನಿ, ಯಜಮಾನನ ತಮ್ಮ ಮತ್ತು ಆತನ ಪತ್ನಿ, ಮಕ್ಕಳು ಮೊಮ್ಮಕ್ಕಳಲ್ಲಿ ಕೊರೋನಾ ಸೋಂಕು ದೃಢವಾಗಿದೆ. ಈ ಹದಿನಾರು ಮಂದಿಯನ್ನೂ ಬಿಮ್ಸ್ ಕೊರೋನಾ ವಾರ್ಡ್‌ಗೆ ದಾಖಲು ಮಾಡಲಾಗಿದೆ.
ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 484ಕ್ಕೆ ಏರಿಕೆಯಾಗಿದೆ. 266 ಜನರು ಗುಣಮುಖರಾಗಿದ್ದಾರೆ. ಸಾವಿನ ಸಂಖ್ಯೆ 13ಕ್ಕೆ ಏರಿದೆ. ಶನಿವಾರ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. 205 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ.
ಬೀದರ್‌ನ ಬಹುತೇಕ ಎಲ್ಲಾ ಕೇಸ್ ಗಳಿಗೆ ಮಹಾರಾಷ್ಟ್ರ ನಂಟಿದೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!