Monday, September 27, 2021

16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆ

Follow Us

newsics.com
ಕೋಲಾರ : ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತನೊಬ್ಬ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆ‌ಮಾಡಿದ ಘಟನೆ ಕೋಲಾರದ ಮಾಲೂರು ಬಳಿ ನಡೆದಿದೆ. ಬಾಲಕಿ ತಂದೆತಾಯಿ ತಮಿಳುನಾಡಿಗೆ ಹೋದ ವೇಳೆ ಬಾಲಕಿ ಮತ್ತು ಆಕೆಯ‌ತಂಗಿ ಮಾತ್ರ ಮನೆಯಲ್ಲಿ ಇದ್ದರು. ಹೀಗಾಗಿ ಸಮಯ ಸಾಧಿಸಿ ಮಂಜುನಾಥ್ (27) ಎಂಬಾತ‌ ಏಕಾಏಕಿ ಮನೆಗೆ ನುಗ್ಗಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಈ ವೇಳೆ ಬಾಲಕಿ ಸಹಾಯಕ್ಕಾಗಿ ಕಿರುಚಿದ್ದು ಸೀರೆಯಿಂದ ಗಂಟಲು ಸುತ್ತಿ ನೇಣು ಬಿಗಿದು ಪರಾರಿಯಾಗಿದ್ದಾನೆ.
ಪಕ್ಕದ ಮನೆಗೆ ತೆರಳಿದ್ದ ಬಾಲಕಿಯ ತಂಗಿ ಆರೋಪಿ ಮನೆಯಿಂದ ಹೊರಹೋಗುವುದನ್ನು ನೋಡಿದ್ದಾಳೆ ಎಂದು ಹೇಳಲಾಗಿದೆ. ಈ ಬಗ್ಗೆ ಪೋಷಕರು ದೂರು ನೀಡಿದ್ದು ಕಣ್ಮರೆಯಾದ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

 

ವಾಟ್ಸ್’ಆ್ಯಪ್ ನಲ್ಲಿನ್ನು ಒಂದು ಬಾರಿ ಫೋಟೋ, ವಿಡಿಯೋ ನೋಡಿದ ಬಳಿಕ ಮಾಯ

ಮತ್ತಷ್ಟು ಸುದ್ದಿಗಳು

Latest News

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

newsics.com ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್...

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

newsics.com ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು. ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45...

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

newsics.com ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್...
- Advertisement -
error: Content is protected !!