ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ 18 ಪೊಲೀಸರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಕೊರೋನಾ ನಿಯಂತ್ರಿಸುವ ಸಂಬಂಧ ರಚಿಸಲಾಗಿರುವ ನಿರ್ಬಂಧಿತ ವಲಯದಲ್ಲಿ ಕರ್ತವ್ಯ ನಿರ್ವಹಣೆ ಹಾಗೂ ಅಪರಾಧ ಚಟುವಟಿಕೆ ನಿಯಂತ್ರಣ ಸಂಬಂಧ 24 ಗಂಟೆ ಗಸ್ತು ನಡೆಸಬೇಕಾದ ಪರಿಸ್ಥಿತಿಯಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಕೊರೋನಾ ಸೋಂಕಿಗೆ ತುತ್ತಾಗುತ್ತಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.
ಇದೇ ವೇಳೆ ಮೈಸೂರಿನ ನಜರಾಬಾದ್ ಪೋಲಿಸ್ ಠಾಣೆಗೆ ಕೂಡ ಕೊರೋನಾ ಸೋಂಕಿನ ಭೀತಿ ಎದುರಾಗಿದೆ. ಸಿಬ್ಬಂದಿಯೊಬ್ಬರಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದಿದೆ ಎಂದು ವರದಿಯಾಗಿದೆ. ಈ ಮಧ್ಯೆ ರಾಜಧಾನಿ ಬೆಂಗಳೂರಿನ ಪರಿಸ್ಥಿತಿ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಯಡಿಯೂರಪ್ಪ ಸೋಮವಾರ ಮತ್ತೆ ಬೆಂಗಳೂರು ಶಾಸಕರ ಸಭೆ ಕರೆದಿದ್ದಾರೆ. ಸಂಬಂಧ ಪಟ್ಟ ಎಲ್ಲ ಸಚಿವರು ಈ ಸಭೆಗೆ ಕಡ್ಡಾಯವಾಗಿ ಹಾಜರಿರಬೇಕು ಎಂದು ಮುಖ್ಯಮಂತ್ರಿ ಆದೇಶ ನೀಡಿದ್ದಾರೆ.