Saturday, November 26, 2022

2 ಪ್ರತ್ಯೇಕ ಪ್ರಕರಣ: ಮಗಳ ಸಾವಿಗೆ ಮರುಗಿ ಅಪ್ಪ ಮೃತ್ಯು, ಪತ್ನಿ ಸಾವಿನಿಂದ ನೊಂದ ಪತಿ,‌ ಮಕ್ಕಳಿಬ್ಬರ ಆತ್ಮಹತ್ಯೆ

Follow Us

newsics.com

ಚಿಕ್ಕೋಡಿ/ಮಂಡ್ಯ: ಅಪ್ಪಂದಿರ ದಿನವಾದ ಇಂದು(ಜೂ.20) ಚಿಕ್ಕೋಡಿ ಹಾಗೂ ಮಂಡ್ಯದಲ್ಲಿ ನಡೆದ ಪ್ರಕರಣಗಳಲ್ಲಿ ಪತ್ನಿ ಸಾವಿನಿಂದ ಮನನೊಂದಿದ್ದ ಪತಿ ತನ್ನ ಇಬ್ಬರು ಹೆಣ್ಣುಮಕ್ಕಳ ಜತೆ ಆತ್ಮಹತ್ಯೆ ಮಾಡಿಕೊಂಡರೆ, ಮತ್ತೂಂದು ಪ್ರಕರಣದಲ್ಲಿ ಮಗಳ ಆತ್ಮಹತ್ಯೆಯಿಂದ ಮನನೊಂದ ತಂದೆ ಆಘಾತದಿಂದ ಸಾವನ್ನಪ್ಪಿದ್ದಾರೆ.
ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ಭಾನುವಾರ ಕಾಡಪ್ಪ ಪ್ರಧಾನಿ ರಂಗಾಪೂರೆ (48), ಹೆಣ್ಣುಮಕ್ಕಳಾದ ಕೀರ್ತಿ (18), ಸ್ಫೂರ್ತಿ (16) ಜತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಾರದ ಹಿಂದೆ ಚೆನ್ನವ್ವ ಕಾಡಪ್ಪ ರಂಗಾಪೂರೆ ಹೃದಯಘಾತದಿಂದ ಮೃತಪಟ್ಟಿದ್ದರು. ಪತ್ನಿ ಸಾವಿಗೆ ಮನನೊಂದು ಪತಿ ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಚಿಕ್ಕೋಡಿ ಪೊಲೀಸರು ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ತಳಗವಾಡಿ ಗ್ರಾಮದಲ್ಲಿ ಬಾಂಧವ್ಯ(17) ಆತ್ಮಹತ್ಯೆಯಿಂದ ಮನನೊಂದಿದ್ದ ಆಕೆಯ ತಂದೆ ರಾಜು (65) ಆಘಾತಕ್ಕೊಳಗಾಗಿ ಲೋ ಬಿಪಿಯಿಂದ ಸಾವನ್ನಪ್ಪಿದ್ದಾರೆ. ಆನ್‌ಲೈನ್‌ ತರಗತಿಗಳಿಂದ ಖಿನ್ನತೆಗೆ ಒಳಗಾಗಿದ್ದ ಬಾಂಧವ್ಯ, ವಿದ್ಯಾಭ್ಯಾಸ ಕುಂಠಿತವಾಗುವ ಆತಂಕದಿಂದ ನೇಣಿಗೆ ಶರಣಾಗಿದ್ದಾಳೆಂದು ತಿಳಿದುಬಂದಿದೆ. ಕಳೆದ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.92 ಅಂಕ ಪಡೆದಿದ್ದಳು. ನಂತರ ಬನ್ನೂರು ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು.

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!