Saturday, April 17, 2021

3 ಪ್ರತ್ಯೇಕ ಶೈಕ್ಷಣಿಕ ಟಿವಿ ಚಾನೆಲ್; ಕೇಂದ್ರಕ್ಕೆ ರಾಜ್ಯದ ಮನವಿ

ಕಲಬುರಗಿ: ಭವಿಷ್ಯದ ಶಿಕ್ಷಣ ವ್ಯವಸ್ಥೆ ಹಾಗೂ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಮೂರು ಪ್ರತ್ಯೇಕ ಟಿವಿ ಚಾನೆಲ್ ಗೆ ಅವಕಾಶ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇನೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.
ರಾಜ್ಯದ ಮಕ್ಕಳಿಗೆ ಈಗಾಗಲೇ ಚಂದನ ವಾಹಿನಿಯಲ್ಲಿ ಶಿಕ್ಷಣ ಮಾರ್ಗದರ್ಶನ ನಡೆದಿದೆ. ಮಕ್ಕಳವಾಣಿ ಎಂಬ ಯೂಟ್ಯೂಬ್ ಚಾನೆಲ್ ಕೂಡ ಆರಂಭಿಸಲಾಗಿದೆ. ಅದನ್ನು ಮಕ್ಕಳು ಬಳಸಿಕೊಳ್ಳುತ್ತಿದ್ದಾರೆ‌. ಆದರೆ ಕೊರೋನಾದಂತಹ ಸವಾಲು ಶಿಕ್ಷಣ ವ್ಯವಸ್ಥೆಯ ಮೇಲೆ ಹೆಚ್ಚಿನ ಪರಿಣಾಮ ಬೀರಿದೆ‌. ಹೀಗಾಗಿ ಪಠ್ಯಕ್ರಮ, ಕ್ರೀಡೆ, ಶಿಕ್ಷಣ, ಬೋಧನೆ ಎಲ್ಲದರಲ್ಲೂ ಸವಾಲುಗಳಿವೆ. ಇದನ್ನು ಎದುರಿಸಲು ನಾವು ಸಜ್ಜಾಗಬೇಕಿದೆ. ಹೀಗಾಗಿ ಶಿಕ್ಷಣಕ್ಕೆ ಮೂರು ಪ್ರತ್ಯೇಕ ವಾಹಿನಿ ಅಗತ್ಯವಿದ್ದು ಇದನ್ನು ಕೇಂದ್ರಕ್ಕೆ ಮನವರಿಕೆ ಮಾಡಿದ್ದೇನೆ ಎಂದಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!