Saturday, April 17, 2021

ರಾಜ್ಯದಲ್ಲಿ ಒಂದೇ ದಿನ 37 ಮಕ್ಕಳಿಗೆ ಕೊರೋನಾ ಸೋಂಕು

ಬೆಂಗಳೂರು:  ರಾಜ್ಯದಲ್ಲಿ ಒಂದೇ ದಿನ ಮಾರಕ  ಕೊರೋನಾ 196 ಮಂದಿಯ ಮೇಲೆ ದಾಳಿ ನಡೆಸಿದೆ. ಹೊಸದಾಗಿ 196 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  1939ಕ್ಕೆ ಏರಿದೆ. ಗದಗ,  15,ಚಿಕ್ಕಬಳ್ಳಾಪುರ, 20, ಪ್ರಕರಣ ವರದಿಯಾಗಿದೆ. ಯಾದಗಿರಿಯಲ್ಲಿ 72, ಮಂಡ್ಯ 28, ಬೆಂಗಳೂರು- 4 . ದಕ್ಷಿಣ ಕನ್ನಡ 3 ಮತ್ತು ಉಡುಪಿಯಲ್ಲಿ 1 ಪ್ರಕರಣ ಹೊಸದಾಗಿ ವರದಿಯಾಗಿದೆ.   ಇಂದು ವರದಿಯಾದ 196 ಪ್ರಕರಣದಲ್ಲಿ 184 ಮಂದಿ ಮುಂಬೈ  ಸಂಪರ್ಕ ಹೊಂದಿದ್ದಾರೆ.  ದೃಢಪಟ್ಟ ಕೊರೋನಾ ಪ್ರಕರಣದಲ್ಲಿ 15 ವರ್ಷದೊಳಗಿನ   37 ಮಕ್ಕಳು ಕೂಡ ಸೇರಿದ್ದಾರೆ. ಬೆಂಗಳೂರಿನಲ್ಲಿ ನಾಲ್ಕು ತಿಂಗಳ ಮಗುವಿನಲ್ಲಿ ಕೂಡ ಕೊರೋನಾ ಸೋಂಕು ಕಂಡು ಬಂದಿದೆ.. ಯಾದಗಿರಿಯಲ್ಲಿ ಅತೀ ಹೆಚ್ಚು ಮಕ್ಕಳು  ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಬೆಂಗಳೂರಿನಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರಲ್ಲಿ ಕೊರೋನಾ ಸೋಂಕು ಕಂಡು ಬಂದಿದ್ದು, ಅವರು ಟಿಪ್ಪು ನಗರದಲ್ಲಿ ಕರ್ತವ್ಯ ನಿರ್ವಹಿಸಿದ್ದರು ಎಂದು ವರದಿಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

ತ್ರಿಬಲ್ ಟಿ ಸೂತ್ರ ಪಾಲನೆಗೆ ಪ್ರಧಾನಿ ಮೋದಿ ಸಲಹೆ

newsics.com ನವದೆಹಲಿ: ಇಂದಿಲ್ಲಿ (ಏ.17) ನಡೆದ ಕೊರೋನಾ ಹಿನ್ನೆಲೆಯ ಮಹತ್ವದ ಸಭೆಯ ಬಳಿಕ ಪ್ರಧಾನಿ ಮೋದಿಯವರು ತ್ರಿಬಲ್ ಟಿ ಸೂತ್ರ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ. ದೇಶದಲ್ಲಿ ಅತಿಯಾಗಿ ಹೆಚ್ಚುತ್ತಿರುವ ಕೊರೋನಾ...

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದರು. ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು,...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...
- Advertisement -
error: Content is protected !!