Tuesday, January 26, 2021

ಪದವಿ, ಪಿಜಿ, ಡಿಪ್ಲೊಮಾ ಸೆಮಿಸ್ಟರ್ ಪರೀಕ್ಷಾ ಶುಲ್ಕದಲ್ಲಿ ಶೇ.50 ರಿಯಾಯಿತಿ

ಬೆಂಗಳೂರು: ಪದವಿ‌, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ಕೋರ್ಸ್’ಗಳ ಮುಂದಿ‌ನ ಸೆಮಿಸ್ಟರ್ ಪರೀಕ್ಷಾ ಶುಲ್ಕದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲು ಸರ್ಕಾರ ನಿರ್ಧರಿಸಿದೆ.
ಕೊರೋನಾ ಹಿನ್ನೆಲೆಯಲ್ಲಿ ಮಧ್ಯಂತರ ಸೆಮಿಸ್ಟರ್’ಗಳ ಪರೀಕ್ಷೆಗಳನ್ನು ರದ್ದು‌ ಮಾಡಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎ‌ನ್. ಅಶ್ವತ್ಥನಾರಾಯಣ ತಿಳಿಸಿದರು. ಈ ಸಂಬಂಧ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಸುತ್ತೋಲೆ ಕಳುಹಿಸಲು ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ ಅವರಿಗೆ ಸಚಿವರು ಸೂಚಿಸಿದ್ದಾರೆ.

4 ಸರ್ಕಾರಿ ಶಾಲೆ ದತ್ತು ಪಡೆದ ಸ್ಯಾಂಡಲ್​​ವುಡ್​ ಬಾದ್’ಷಾ

ಕೆಲವು ವಿಶ್ವವಿದ್ಯಾಲಯಗಳು ಈಗಾಗಲೇ ಪರೀಕ್ಷಾ ಶುಲ್ಕ ಸಂಗ್ರಹಿಸಿದ್ದು ಅದನ್ನು ವಾಪಸ್ ಕೊಡಿಸಿ‌ ಎನ್ನುವ ಮನವಿ ವಿದ್ಯಾರ್ಥಿಗಳಿಂದ ಬಂದಿತ್ತು. ಇದಕ್ಕೆ ಸ್ಪಂದಿಸಿದ ಅಶ್ವತ್ಥನಾರಾಯಣ ಅವರು‌, ಮುಂದಿ‌ನ ಸೆಮಿಸ್ಟರ್ ಗಳ ಪರೀಕ್ಷಾ ಶುಲ್ಕದಲ್ಲಿ ಶೇ 50 ರಷ್ಟು ರಿಯಾಯಿತಿ ನೀಡಲು ಸೂಚಿಸಲಾಗುವುದು ಎಂದು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹಣಕ್ಕೆ ಬೇಡಿಕೆ ಆರೋಪ: ಸಚಿವ ಅಶೋಕ್ ಪಿ ಎ ವಿರುದ್ಧ ದೂರು ದಾಖಲು

Newsics.com ಚಿಕ್ಕಮಗಳೂರು: ಕಂದಾಯ ಸಚಿವ ಆರ್ ಅಶೋಕ್ ಅವರ ಆಪ್ತ ಸಹಾಯಕ ಗಂಗಾಧರ್ ವಿರುದ್ದ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗಂಗಾಧರ್ ಅವರು ಹಣಕ್ಕೆ ಬೇಡಿಕೆ...

ಒಂದೇ ದಿನ 9102 ಜನರಿಗೆ ಕೊರೋನಾ ಸೋಂಕು,117 ಮಂದಿ ಸಾವು

Newsics com ನವದೆಹಲಿ: ದೇಶದಲ್ಲಿ ಕೊರೋನಾದ  ಅಬ್ಬರ ಇಳಿಮುಖವಾಗುತ್ತಿದೆ.ಕಳೆದ  24 ಗಂಟೆಯಲ್ಲಿ  9,102 ಮಂದಿಯಲ್ಲಿ  ಕೊರೋನಾ ಸೋಂಕು ದೃಢಪಟ್ಟಿದೆ.  ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,06.76,838 ಕ್ಕೆ ತಲುಪಿದೆ.    ಕಳೆದ 24 ಗಂಟೆಯಲ್ಲಿ ಕೊರೋನಾ...

2022ರ ದೀಪಾವಳಿ ವೇಳೆಗೆ ದುಬೈನಲ್ಲಿ ಹೊಸ ಹಿಂದೂ ದೇಗುಲ ಲೋಕಾರ್ಪಣೆ

newsics.comದುಬೈ (ಯುಎಇ): ಮುಂದಿನ ವರ್ಷದ (2022) ದೀಪಾವಳಿ ಹೊತ್ತಿಗೆ ದುಬೈನಲ್ಲಿ ಹೊಸ ಹಿಂದೂ ದೇವಾಲಯವೊಂದು ಲೋಕಾರ್ಪಣೆಗೊಳ್ಳಲಿದೆ.ಅರೇಬಿಯನ್ ವಾಸ್ತುಶಿಲ್ಪ ಸೌಂದರ್ಯವನ್ನು ದೇವಾಲಯ ಹೊಂದಿರುತ್ತದೆ. 11 ಹಿಂದೂ ದೇವತೆಗಳನ್ನು ಈ ದೇಗುಲದಲ್ಲಿ ದರ್ಶಿಸಬಹುದಾಗಿದೆ...
- Advertisement -
error: Content is protected !!