Saturday, November 26, 2022

ರಾಜ್ಯದಲ್ಲಿ 5,983 ಮಂದಿಗೆ ಸೋಂಕು, 10,685 ಗುಣಮುಖ, 138 ಜನ ಸಾವು

Follow Us

newsics.com

ಬೆಂಗಳೂರು: ರಾಜ್ಯದಲ್ಲಿ ಒಂದು ತಿಂಗಳ ನಂತರ ಸಕ್ರಿಯ ಪ್ರಕರಣಗಳ ಸಂಖ್ಯೆ ಇದೇ ಮೊದಲ ಬಾರಿಗೆ 1.5 ಲಕ್ಷಕ್ಕಿಂತ ಕಡಿಮೆಯಾಗಿದೆ.

ರಾಜ್ಯದಲ್ಲಿ ಇಂದು(ಜೂ.17) ಹೊಸದಾಗಿ 5983 ಜನರಿಗೆ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 1209 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 17 ಮಂದಿ ಸೇರಿದಂತೆ ರಾಜ್ಯದಲ್ಲಿ ಇಂದು 138 ಸೋಂಕಿತರು ಸಾವನ್ನಪ್ಪಿದ್ದಾರೆ. ಇವತ್ತು 1,58,442 ಪರೀಕ್ಷೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಇಂದು 10,685 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 26,10,157ಕ್ಕೆ ಏರಿಕೆಯಾಗಿದೆ.

ಇನ್ನು 1,46,726 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಈವರೆಗೂ 27,90,338 ಜನರಿಗೆ ಸೋಂಕು ತಗುಲಿದ್ದು, 33,434 ಮಂದಿ ಬಲಿಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ಕೊರೊನಾ ಹರಡುವಿಕೆಯ ಪಾಸಿಟಿವಿಟಿ ದರ 3.77%ಕ್ಕೆ ಇಳಿಕೆಯಾಗಿದೆ. ಇನ್ನು ಮರಣ ಪ್ರಮಾಣ 2.30%ಕ್ಕೆ ಇಳಿಕೆಯಾಗಿದೆ. ರಾಜ್ಯಾದ್ಯಂತ 1,58,442 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.

ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು, ಇಂದು 1,209 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,01,963ಕ್ಕೆ ಏರಿಕೆಯಾಗಿದೆ. 1,510 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 11,07,648ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 17 ಜನ ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 15,371 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ, 78,943 ಸಕ್ರಿಯ ಪ್ರಕರಣಗಳಿವೆ.
ಬಾಗಲಕೋಟೆ-22, ಬಳ್ಳಾರಿ-128, ಬೆಳಗಾವಿ-172, ಬೆಂಗಳೂರು ಗ್ರಾಮಾಂತರ-226, ಬೆಂಗಳೂರು ನಗರ-1209,ಬೀದರ್-8, ಚಾಮರಾಜನಗರ-98, ಚಿಕ್ಕಬಳ್ಳಾಪುರ-119, ಚಿಕ್ಕಮಗಳೂರು-198, ಚಿತ್ರದುರ್ಗ-110, ದಕ್ಷಿಣ ಕನ್ನಡ -679, ದಾವಣಗೆರೆ-153, ಧಾರವಾಡ-86, ಗದಗ-34, ಹಾಸನ-424, ಹಾವೇರಿ-42,ಕಲಬುರಗಿ-25, ಕೊಡಗು-152, ಕೋಲಾರ-145, ಕೊಪ್ಪಳ-48, ಮಂಡ್ಯ-309, ಮೈಸೂರು-596, ರಾಯಚೂರು-16, ರಾಮನಗರ-37, ಶಿವಮೊಗ್ಗ-229, ತುಮಕೂರು-289, ಉಡುಪಿ-166, ಉತ್ತರ ಕನ್ನಡ-169, ವಿಜಯಪುರ-83, ಯಾದಗಿರಿಯಲ್ಲಿ 11 ಸೊಂಕು ಪ್ರಕರಣಗಳು ಪತ್ತೆಯಾಗಿವೆ.

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!