ಬೆಂಗಳೂರು : ರಾಜ್ಯದಲ್ಲಿ ಬುಧವಾರ ಮಧ್ಯಾಹ್ನದವರೆಗೆ 63 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಈವರೆಗೆ 1458 ಜನರಿಗೆ ಸೋಂಕು ತಗುಲಿದೆ.
ಬೆಂಗಳೂರು 4, ಮಂಡ್ಯ 8, ಬೀದರ್ 10 , ಕಲಬುರಗಿ 7, ಹಾಸನ 21, ಉತ್ತರ ಕನ್ನಡ 1, ದಕ್ಷಿಣ ಕನ್ನಡ 1, ತುಮಕೂರು 4, ಉಡುಪಿ 6, ಯಾದಗಿರಿಯಲ್ಲಿ ಒಬ್ಬರಿಗೆ ಸೋಂಕು ಪತ್ತೆಯಾಗಿದೆ.
ಈವರೆಗೆ ರಾಜ್ಯದಲ್ಲಿ ಒಟ್ಟೂ 40 ಜನರು ಕೊರೋನಾದಿಂದ ಸಾವಿಗೀಡಾಗಿದ್ದಾರೆ. ರಾಜ್ಯದಲ್ಲಿ ಇಂದು 10 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.