ಬೆಂಗಳೂರು: ರಾಜ್ಯಕ್ಕೆ ಪಿಎಂ ಕೇರ್ಸ್ ನಿಧಿಯಡಿ 681 ವೆಂಟಿಲೇಟರ್ ಲಭಿಸಿದ್ದು, 1,279 ವೆಂಟಿಲೇಟರ್ಗಳು ಶೀಘ್ರವೇ ಬರಲಿವೆ ಎಂದು ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ.
ಆಸ್ಪತ್ರೆಯಲ್ಲಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜ್ಯದಲ್ಲಿ ಹೆಚ್ಚುತ್ತಿರುವ ವೆಂಟಿಲೇಟರ್ ಬೆಡ್ಗಳ ಬಗ್ಗೆ ಮಂಗಳವಾರ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.
ಯಡಿಯೂರಪ್ಪ ಅವರು ಕೋವಿಡ್ ನಿಯಂತ್ರಣಕ್ಕೆ ಅಗತ್ಯವಿರುವ ಪ್ಯಾರಾ ಮೆಡಿಕಲ್ ಸಿಬ್ಬಂದಿ, ನರ್ಸ್ ಮುಂತಾದ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ರಾಜ್ಯಕ್ಕೆ ಬಂದಿರುವ ವೆಂಟಿಲೇಟರ್ಗಳನ್ನು ತಕ್ಷಣ ಜೋಡಿಸಬೇಕು ಎಂದು ಸೂಚಿಸಿದ್ದಾರೆ.
ರಾಜ್ಯಕ್ಕೆ ಬಂದಿರುವ 681 ವೆಂಟಿಲೇಟರ್ಗಳಲ್ಲಿ 166 ಬೆಂಗಳೂರು ನಗರದ ಆಸ್ಪತ್ರೆಗಳಲ್ಲಿ ಬಳಕೆ ಮಾಡಲಾಗುತ್ತದೆ. ಉಳಿದವುಗಳನ್ನು ಜಿಲ್ಲಾ ಕೇಂದ್ರಗಳಿಗೆ ಕಳಿಸಲಾಗುತ್ತದೆ. ಆಗಸ್ಟ್ ಅಂತ್ಯದ ವೇಳೆಗೆ 1,279 ವೆಂಟಿಲೇಟರ್ ರಾಜ್ಯಕ್ಕೆ ಬರಲಿವೆ ಎಂದು ಮುಖ್ಯಮಂತ್ರಿಗಳ ಕಚೇರಿ ಮೂಲಗಳು ತಿಳಿಸಿವೆ. ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯಡಿಯೂರಪ್ಪ ಅವರು, ದೂರವಾಣಿಯಲ್ಲೇ ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡುತ್ತಿದ್ದಾರೆ.
ಕೇಂದ್ರದಿಂದ ರಾಜ್ಯಕ್ಕೆ 681 ವೆಂಟಿಲೇಟರ್, 1,279 ಶೀಘ್ರ
Follow Us