Tuesday, April 13, 2021

ಬೆಂಗಳೂರಲ್ಲಿ 800, ರಾಜ್ಯದಲ್ಲಿ 1498 ಮಂದಿಗೆ ಸೋಂಕು, 15 ಬಲಿ

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಕೂಡ ಕೊರೋನಾ ಸೋಂಕಿತರ ಸರಣಿ ಮುಂದುವರೆದಿದೆ. ರಾಜ್ಯದಲ್ಲಿ ಮಂಗಳವಾರ ಹೊಸದಾಗಿ 1498 ಜನರಿಗೆ ಕೊರೋನಾ ಸೋಂಕು ತಗುಲಿದೆ. ಹೀಗಾಗಿ ಸೋಂಕಿತರ ಸಂಖ್ಯೆ 26,817ಕ್ಕೆ ಏರಿಕೆಯಾಗಿದೆ. ಮಂಗಳವಾರ ಕಿಲ್ಲರ್ ಕೊರೋನಾಗೆ 15 ಜನರು ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 416ಕ್ಕೆ ಏರಿಕೆಯಾಗಿದೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದು, ಮಂಗಳವಾರ ಬೆಂಗಳೂರು ಒಂದರಲ್ಲಿಯೇ 800 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿರುವುದಾಗಿ ತಿಳಿಸಿದ್ದಾರೆ. ಬೀದರ್’ನಲ್ಲಿ ಐವರು ಸೋಂಕಿತರು ಮರಣ ಹೊಂದಿದ್ದರೆ, ಬಾಗಲಕೋಟೆ, ದಕ್ಷಿಣ ಕನ್ನಡ, ಮಂಡ್ಯ ಜಿಲ್ಲೆಗಳಲ್ಲಿ ತಲಾ ಓರ್ವ ಸೋಂಕಿತ ಸಾವನ್ನಪ್ಪಿದ್ದಾರೆ. ಮಂಗಳವಾರ ಬೆಂಗಳೂರಿನಲ್ಲಿ ಅತೀ ಹೆಚ್ಚು 800 ಮಂದಿಗೆ ಸೋಂಕು ದೃಢವಾಗಿದ್ದರೆ, ಬೀದರ್’ನಲ್ಲಿ 51 ಮಂದಿಗೆ, ಚಾಮರಾಜನಗರದಲ್ಲಿ ಆರು ಮಂದಿಗೆ ಕೋವಿಡ್ ಸೋಂಕು ದೃಢವಾಗಿದೆ. ಒಟ್ಟು 571 ಮಂದಿ ಆಸ್ಪತ್ರೆಯಿಂದ ಡಿಸ್​​ಚಾರ್ಜ್​ ಆಗಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ 265 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಸದ್ಯ 9395 ಸಕ್ರಿಯ ಪ್ರಕರಣಗಳಿದೆ. ಇದುವರೆಗೆ ಬೆಂಗಳೂರಿನಲ್ಲಿ 155 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!