Tuesday, April 13, 2021

ಒಂದೇ ದಿನ 99 ಮಂದಿಗೆ ಕೊರೋನಾ ಸೋಂಕು

ಬೆಂಗಳೂರು: ಕೊರೋನಾ ವೈರಸ್ ಸೋಂಕು ಕರ್ನಾಟಕಕ್ಕೆ ಶಾಕ್ ಕೊಟ್ಟಿದೆ. ಸೋಮವಾರ (ಮೇ 18) ಒಂದೇ ದಿನ ಬರೋಬ್ಬರಿ 99 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಇದೀಗ 1246ಕ್ಕೆ ಏರಿಕೆಯಾಗಿದ್ದು, ರಾಜ್ಯಾದ್ಯಂತ ಆತಂಕ ಶುರುವಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂದೇ ದಿನ ಬರೋಬ್ಬರಿ 24 ಮಂದಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಮಂಡ್ಯದಲ್ಲಿ 17, ಕಲಬುರಗಿ 11, ಉತ್ತರ ಕನ್ನಡ 8, ರಾಯಚೂರು 6, ಗದಗ 5, ಯಾದಗಿರಿ 5, ವಿಜಯಪುರ 5, ಹಾಸನ 4, ಕೊಪ್ಪಳ 3, ಬೆಳಗಾವಿ 2, ದಕ್ಷಿಣ ಕನ್ನಡ 2, ಉಡುಪಿ, ಮೈಸೂರು, ದಾವಣಗೆರೆ, ಬೀದರ್, ಕೊಡಗು ಜಿಲ್ಲೆಗಳಲ್ಲಿ ತಲಾ ಒಂದೊಂದು ಪ್ರಕರಣ ದಾಖಲಾಗಿದೆ.
ಸೋಮವಾರ ಬೆಳಗಿನ ಹೆಲ್ತ್ ಬುಲೆಟಿನ್ ನಲ್ಲಿ 84 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಆದರೆ ಸಂಜೆಯ ವೇಳೆಗೆ ಈ ಸಂಖ್ಯೆ 99ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಲಾಕ್ ಡೌನ್ ಸಡಿಲ ಮಾಡಿದ ಬೆನ್ನಲ್ಲೇ ಕೊರೋನಾ ಸೋಂಕು ಏರಿಕೆಯಾಗುತ್ತಿರೋದು ಆತಂಕ ಮೂಡಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೋಂ ಕ್ವಾರಂಟೈನ್

newsics.com ಲಕ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೊಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಮುಖ್ಯಮಂತ್ರಿ ಕಚೇರಿಯ ಕೆಲವು ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಮುಂಜಾಗ್ರತಾ...

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ ಪ್ರಕರಣ ವರದಿಯಾಗಿದೆ. ರಾಜ್ಯದಲ್ಲಿ ಕೊರೋನಾ ಒಂದೇ ದಿನ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...
- Advertisement -
error: Content is protected !!