newsics.com
ಬೆಂಗಳೂರು: ಕೊರೋನಾ ಹಾಗೂ ವಾಯುಮಾಲಿನ್ಯ ಹಿನ್ನೆಲೆಯಲ್ಲಿ ದೀಪಾವಳಿ ವೇಳೆ ಪಟಾಕಿ ಸುಡುವುದನ್ನು ಸಂಪೂರ್ಣವಾಗಿ ನಿಷೇಧಿಸಿದ್ದ ಸರ್ಕಾರ, ಹಸಿರು ಪಟಾಕಿಗಳನ್ನು ಬಳಸಲು ಸರ್ಕಾರ ಅನುಮತಿ ನೀಡಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ಸರ್ಕಾರ, ದೀಪಾವಳಿ ಹಬ್ಬದ ದಿನ ಪಟಾಕಿ ಮಾರುವುದು ಮತ್ತು ಸಿಡಿಸುವುದನ್ನು ನಿಷೇಧಿಸುವ ಬಗ್ಗೆ ಸಾರ್ವಜನಿಕರಿಂದ ಹಲವಾರು ಸಲಹೆಗಳು ಬಂದಿದ್ದು, ಹಸಿರು ಪಟಾಕಿಗೆ ಅವಕಾಶ ನೀಡುವಂತೆ ಕೋರಲಾಗಿತ್ತು. ಜನರ ಭಾವನೆಗೆ ಸ್ಪಂದಿಸಿರುವ ಸರ್ಕಾರ ಪಟಾಕಿ ಮೇಲಿನ ಸಂಪೂರ್ಣ ನಿಷೇಧವನ್ನು ಹಿಂಪಡೆದು, ಹಸಿರು ಪಟಾಕಿ ಸಿಡಿಸಲು ಸರ್ಕಾರ ಅನುಮತಿ ನೀಡಿದೆ.
ಕೊವಿಡ್-19 ಸೋಂಕು ನಿಯಂತ್ರಿಸಲು ರಾಜ್ಯ ಸರ್ಕಾರವು ಈಗಾಗಲೇ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ. ರಾಜ್ಯದಲ್ಲಿನ ಸಾರ್ವಜನಿಕರು ಮತ್ತು ಮಕ್ಕಳ ಆರೋಗ್ಯ ಹಾಗೂ ಹಿತದೃಷ್ಟಿಯಿಂದ ದೀಪಾವಳಿ ಹಬ್ಬವನ್ನು ಸರಳ ಮತ್ತು ಅರ್ಥಗರ್ಭಿತವಾಗಿ, ಭಕ್ತಿಪೂರ್ವಕವಾಗಿ ಆಚರಿಸುವುದು ಸೂಕ್ತವಾಗಿದೆ ಎಂದು ಸರ್ಕಾರ ಆದೇಶದಲ್ಲಿ ಹೇಳಿದೆ. ಸರ್ಕಾರವು ಈ ಆದೇಶ ಹೊರಡಿಸುವುದಕ್ಕೂ ಮೊದಲು ರಾಜ್ಯದಲ್ಲಿ ಎಲ್ಲಾ ಮಾದರಿಯ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿತ್ತು. ಕೊರೊನಾವೈರಸ್ ಸೋಂಕು ಹರಡುವಿಕೆ ಪ್ರಮಾಣ ಇನ್ನೂ ಕಡಿಮೆಯಾಗದ ಹಿನ್ನೆಲೆ ಮುನ್ನೆಚ್ಚರಿಕೆಯಾಗಿ ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಸರ್ಕಾರವು ಸ್ಪಷ್ಟಪಡಿಸಿತ್ತು. ಆದರೆ ಪಟಾಕಿ ಸಂಪೂರ್ಣ ನಿಷೇಧಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆ ಹಸಿರು ಪಟಾಕಿಗಳನ್ನು ಬಳಸುವುದಕ್ಕೆ ಇದೀಗ ಅನುಮತಿ ನೀಡಲಾಗಿದೆ.
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ; ಪೊಲೀಸ್ ವಶಕ್ಕೆ ಸ್ಯಾಕ್ಸೋಫೋನ್ ಗುರು
ಜಗವೆಲ್ಲ ನಗುತಿರಲಿ…
ಬೆಂಗಳೂರಿನಲ್ಲಿ 1568, ರಾಜ್ಯದಲ್ಲಿ 2960 ಮಂದಿಗೆ ಕೊರೋನಾ, 35 ಬಲಿ