newsics.com
ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರದ ಅಂಗವಾಗಿ ನಾಡಿನಾದ್ಯಂತ ಸಂಚರಿಸಲಿರುವ ಕನ್ನಡ ರಥಕ್ಕೆ ಅದ್ಧೂರಿ ಚಾಲನೆ ನೀಡಲಾಗಿದೆ.
ತಾಲ್ಲೂಕಿನ ಗೊಟಗೋಡಿಯ ಜಾನಪದ ವಿಶ್ವವಿದ್ಯಾಲಯದ ಆವರಣದಲ್ಲಿ ಅದ್ಧೂರಿ ಚಾಲನೆ ನೀಡಲಾಯಿತು. ಕನ್ನಡ ರಥಕ್ಕೆ ಡಿ.1ರಂದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಭುವನಗಿರಿಯ ಭುವನೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ರಾಜ್ಯದ 31 ಜಿಲ್ಲೆಗಳಲ್ಲೂ ಸಂಚರಿಸಲಿದೆ.
ಭುವನೇಶ್ವರಿ ದೇಗುಲದಿಂದ ದೀಪ ತೆಗೆದುಕೊಂಡು ಕನ್ನಡ ರಥ ಹೊರಡಲಿದೆ. ಅದೇ ದೀಪದಿಂದ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟನೆ ಮಾಡಲಿರುವುದು ಈ ಬಾರಿಯ ವಿಶೇಷ ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗಯ್ಯ ಹಿರೇಮಠ ತಿಳಿಸಿದ್ದಾರೆ.ಜ.6ರಂದು ಹಾವೇರಿ ನಗರದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನದ ಮೆರವಣಿಗೆಯಲ್ಲಿ ಕನ್ನಡ ರಥ ಸಾಗಲಿದೆ.
ಭಾರತದ ಜತೆಗಿನ ಸಂಬಂಧದಲ್ಲಿ ಮೂಗು ತೂರಿಸಬೇಡಿ: ಅಮೆರಿಕಕ್ಕೆ ಚೀನಾ ಖಡಕ್ ಎಚ್ಚರಿಕೆ