Friday, July 1, 2022

ಕಾಡಾನೆ ತುಳಿತಕ್ಕೆ ವ್ಯಕ್ತಿ ಬಲಿ

Follow Us

newsics.com
ಚಾಮರಾಜನಗರ: ಬಿಳಿಗಿರಿರಂಗನಾಥಸ್ವಾಮಿ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದ ಕೆ.ಗುಡಿ ವಲಯದ ವ್ಯಾಪ್ತಿಯ ಹೊಂಗಲವಾಡಿ ಗ್ರಾಮದಲ್ಲಿ ಕಾಡಾನೆಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.
ಹೊಂಗಲವಾಡಿ ಗ್ರಾಮದ ಗುರುಸ್ವಾಮಿ (55) ಮೃತಪಟ್ಟವರು. ಅವರು ಬುಧವಾರ ಕಾಡಂಚಿನ ಪ್ರದೇಶದಲ್ಲಿ ಹಸುಗಳನ್ನು ಮೇಯಲು ಬಿಟ್ಟಿದ್ದರು. ಹಸುಗಳನ್ನು ಹುಡುಕಿಕೊಂಡು ಕಾಡಿಗೆ ಹೋಗಿದ್ದಾಗ ಆನೆ ದಾಳಿ ಮಾಡಿದೆ ಎನ್ನಲಾಗಿದೆ.
ಗುರುಸ್ವಾಮಿ ಅವರು ರಾತ್ರಿ ಮನೆಗೆ ಬಾರದೇ ಇದ್ದುದರಿಂದ ಆತಂಕಕೊಂಡ ಮನೆಯವರು ಗುರುವಾರ ಬೆಳಗ್ಗೆ ಕಾಡಂಚಿನ ಪ್ರದೇಶದಲ್ಲಿ ಹುಡುಕಾಟ ನಡೆಸಿದ್ದಾರೆ. ಕಾಲುವೆಯೊಂದರ ಬಳಿ ಮೃತದೇಹ ಪತ್ತೆಯಾಗಿದೆ.
ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್‌ಕುಮಾರ್‌, ‘ಆನೆ ದಾಳಿಯಿಂದಲೇ ವ್ಯಕ್ತಿ ಮೃತಪಟ್ಟಿದ್ದಾರೆ. ಆದರೆ, ಜಮೀನಿನಲ್ಲಿ ಅಥವಾ ಕಾಡಿನಲ್ಲಿ ದಾಳಿ ಮಾಡಿದೆಯೇ ಎಂಬುದು ಗೊತ್ತಾಗಿಲ್ಲ. ಆರ್‌ಎಫ್‌ಒ ಅವರ ವರದಿ ಬಂದ ನಂತರ ತಿಳಿಯಲಿದೆ’ ಎಂದು ಹೇಳಿದರು. ಚಾಮರಾಜನಗರ ಪೂರ್ವ ಪೊಲೀಸ್‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಹೊಸದಾಗಿ 17,070 ಕೊರೋನಾ ಸೋಂಕು ಪ್ರಕರಣ, 23 ಜನರ ಸಾವು

newsics.com ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 17,070 ಕೊರೋನಾ ಪ್ರಕರಣ ವರದಿಯಾಗಿದೆ. ಕೊರೋನಾ ಸೋಂಕಿತರಾಗಿದ್ದ...

ವಾಣಿಜ್ಯ ಬಳಕೆಯ ಸಿಲಿಂಡರ್ ದರ 198 ರೂಪಾಯಿ ಇಳಿಕೆ

newsics.com ನವದೆಹಲಿ: ಹೋಟೆಲ್ ಮಾಲಿಕರಿಗೆ ಸಿಹಿ ಸುದ್ದಿ. ಇದು ಬಳಕೆದಾರರಿಗೂ ಸ್ವೀಟ್  ನ್ಯೂಸ್. ವಾಣಿಜ್ಯ ಬಳಕೆಯ ಎಲ್ ಪಿ ಜಿ ಸಿಲಿಂಡರ್ ದರದಲ್ಲಿ ಇಳಿಕೆಯಾಗಿದೆ. ತೈಲ ಸಂಸ್ಥೆಗಳು 198 ರೂಪಾಯಿ ಕಡಿತ ಮಾಡಿವೆ. ಇಂದಿನಿಂದ...

ಶನಿವಾರ ಏಕನಾಥ್ ಶಿಂಧೆ ವಿಶ್ವಾಸ ಮತ ಯಾಚನೆ

newsics.com ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಶನಿವಾರ ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚಿಸಲಿದ್ದಾರೆ. ಬಿಜೆಪಿ ಬೆಂಬಲಪಡೆದು ಏಕನಾಥ್ ಶಿಂಧೆ ಸರ್ಕಾರ ರಚಿಸಿದ್ದಾರೆ. ಶಿಂಧೆ ಬಣದಲ್ಲಿ 40ಕ್ಕೂ ಹೆಚ್ಚು ಶಾಸಕರು ಗುರುತಿಸಿಕೊಂಡಿರುವ ಹಿನ್ನೆಲೆಯಲ್ಲಿ...
- Advertisement -
error: Content is protected !!