Wednesday, October 5, 2022

2 ಖಾಸಗಿ ಬಸ್ ನಡುವೆ ಅಪಘಾತ; ಸ್ಟೇರಿಂಗ್’ನಡಿ ಸಿಲುಕಿ ಪರದಾಡಿದ ಚಾಲಕ

Follow Us

newsics.com
ವಿಜಯಪುರ: ಖಾಸಗಿ ಬಸ್’ಗಳ ಮಧ್ಯೆ ಅಪಘಾತ ಸಂಭವಿಸಿ ಚಾಲಕ ಸ್ಟೇರಿಂಗ್ ಅಡಿ ಸಿಲುಕಿ ಪರದಾಡಿದ್ದು, ಪ್ರಾಣಾಪಾಯದಿಂದ ಪಾರಾದ ಘಟನೆ ಆಲಮಟ್ಟಿಯಲ್ಲಿ ಗುರುವಾರ ರಾತ್ರಿ ನಡೆದಿದೆ.
ಸಂತೋಷ ಪ್ರಾಣಾಪಾಯದಿಂದ ಪಾರಾದ ಚಾಲಕ. ಒಂದು ಖಾಸಗಿ ಬಸ್ ಚಲಿಸುತ್ತಿರುವಾಗ ಹಿಂಬದಿಯಿಂದ ಇನ್ನೊಂದು ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ವಿಜಯಪುರದಿಂದ ಬೆಂಗಳೂರಿಗೆ ಹೋಗುವ ಎರಡು ಖಾಸಗಿ ಬಸ್‌ಗಳ ಮಧ್ಯೆ ಈ ಘಟನೆ ನಡೆದಿದೆ. ಆಲಮಟ್ಟಿ ಬಳಿಯ ಪೆಟ್ರೋಲ್ ಬಂಕ್ ಬಳಿ ಗುರುವಾರ ರಾತ್ರಿ 9.45ರ ಸುಮಾರಿಗೆ ಈ ಘಟನೆ ನಡೆದಿದೆ.
ಬಸ್ ಚಾಲಕ ಸಂತೋಷ ಸ್ಟೇರಿಂಗ್ ಅಡಿ ಸಿಲುಕಿಕೊಂಡಿದ್ದನ್ನು ಗಮನಿಸಿದ ಸ್ಥಳೀಯರು ಹಾಗೂ ಬಸ್ ಪ್ರಯಾಣಿಕರು ಸ್ಟೇರಿಂಗ್ ಗೆ ಹಗ್ಗ ಕಟ್ಟಿ ಎಳೆದು ಬಸ್ ಚಾಲಕನ ಪ್ರಾಣ ಕಾಪಾಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ನಿಡಗುಂದಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಖ್ಯಾತ ಪತ್ರಕರ್ತ, ಸಾಹಿತಿ ರವಿ ಬೆಳಗೆರೆ ಇನ್ನಿಲ್ಲ

ಹುಬ್ಬಳ್ಳಿ ಪೊಲೀಸ್ ಕಮಿಷನರ್ ಲಾಬೂರಾಮ್ ಅಸ್ವಸ್ಥ; ಬೆಂಗಳೂರಿಗೆ ಏರ್’ಲಿಫ್ಟ್

ಸರ್ಕಾರದ ‘ಹಸಿರು ಪಟಾಕಿ’ ಆದೇಶಕ್ಕೆ ಹೈಕೋರ್ಟ್ ಅಸಮಾಧಾನ

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!