Saturday, November 26, 2022

ಹಣ ಕೊಡದಿದ್ದರೆ ಆ್ಯಸಿಡ್ ಎರಚುವ ಬೆದರಿಕೆ: ಬಾಯ್’ಫ್ರೆಂಡ್ ವಿರುದ್ಧ ಯುವತಿ ದೂರು

Follow Us

newsics.com

ಬೆಂಗಳೂರು: ಐಪೋನ್ ಕೊಡಿಸದಿದ್ದರೆ ಆ್ಯಸಿಡ್ ಎರಚುವುದಲ್ಲದೆ, ಖಾಸಗಿ‌ ಫೋಟೋಗಳನ್ನು ಹರಿಬಿಡುವುದಾಗಿ ತನ್ನ ಬಾಯ್’ಫ್ರೆಂಡ್ ಬೆದರಿಸಿದ್ದಾನೆಂದು ಬಹುರಾಷ್ಟ್ರೀಯ ಕಂಪನಿಯೊಂದರ ಉದ್ಯೋಗಿ ಪೊಲೀಸರಿಗೆ ದೂರು ನೀಡಿದ್ದಾಳೆ.

ಒಂದೂವರೆ ಲಕ್ಷ ರೂ. ಮೌಲ್ಯದ ಐಫೋನ್ 12 ಪ್ರೊ ಮ್ಯಾಕ್ಸ್ ಕೊಡಿಸುವಂತೆ ದುಂಬಾಲು ಬಿದ್ದಿದ್ದಾನೆಂದು 25 ವರ್ಷದ ಯುವತಿ ದೂರಿದ್ದಾಳೆ. ಈಗಾಗಲೇ ಎರಡು ಲಕ್ಷ ರೂ.ಗಳನ್ನು ಫ್ಲೆಕ್ಸಿ‌ ಸಾಲವಾಗಿ ತನ್ನ ಮೂಲಕ‌ ಪಡೆದುಕೊಂಡಿದ್ದಾನೆ. ದಿನೇ ದಿನೆ ಆತನ ಬೇಡಿಕೆ ಹೆಚ್ಚುತ್ತಲೇ ಇದೆ. ತಾನು‌ ಕೇಳಿದ್ದನ್ನು ಕೊಡದಿದ್ದರೆ ತನ್ನ ಖಾಸಗಿ ಫೋಟೊಗಳನ್ನು ಆನ್ ಲೈನ್ ನಲ್ಲಿ ಹರಿಬಿಡುವುದಾಗಿ ಹೆದರಿಸುತ್ತಿದ್ದಾನೆ ಎಂದು ಬೆಂಗಳೂರಿನ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾಳೆ. ಆಕೆ ತಿಳಿಸಿರುವಂತೆ ಆರೋಪಿ ಸೋಷಿಯಲ್ ಮೀಡಿಯಾ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ.

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!