newsics.com
ಬೆಂಗಳೂರು: ಕನ್ನಡ ಸಿನಿಮಾ ರಂಗದ ಹೆಸರಾಂತ ಪೋಷಕ ನಟ ಬ್ಯಾಂಕ್ ಜನಾರ್ದನ್ ಅವರಿಗೆ ನಿನ್ನೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆಯಿಂದ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ಬ್ಯಾಂಕ್ ಜನಾರ್ದನ್ ಅವರಿಗೆ 74 ವರ್ಷ ವಯಸ್ಸು. ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಸಿನಿಮಾ, ಕಿರುತೆರೆ ಮತ್ತು ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು ಜನಾರ್ದನ್. ಹಾಸ್ಯ ನಟರಾಗಿ ಸಾಕಷ್ಟು ಪಾತ್ರಗಳನ್ನು ಅವರು ನಿರ್ವಹಿಸಿದ್ದಾರೆ.