Wednesday, November 30, 2022

ಮಂಗಳವಾರ ಬೆಳಗ್ಗೆ ಸಂಚಾರಿ ವಿಜಯ್ ಅಂತಿಮ ದರ್ಶನ, ಹುಟ್ಟೂರಲ್ಲಿ ಅಂತ್ಯಕ್ರಿಯೆ

Follow Us

newsics.com

ಬೆಂಗಳೂರು: ನಾಳೆ(ಜೂ.15) ಬೆಳಗ್ಗೆ ನಟ ಸಂಚಾರಿ ವಿಜಯ್ ಅವರ ಮೃತದೇಹವನ್ನು‌ ಅಪೋಲೋ ಆಸ್ಪತ್ರೆ ಬಂಧುಗಳ‌ ವಶಕ್ಕೆ ನೀಡಲಿದೆ.

ಬಳಿಕ ಅಂದರೆ ನಾಳೆ ಬೆಳಗ್ಗೆ ಎಂಟರಿಂದ ಹತ್ತರವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ನಿರ್ದೇಶಕ ಮನ್ಸೋರೆ ತಿಳಿಸಿದ್ದಾರೆ. ನಂತರ ವಿಜಯ್ ಅವರ ಹುಟ್ಟೂರು ಚಿಕ್ಕಮಗಳೂರಿನ‌ ಪಂಚನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ವಿಜಯ್ ಅವರ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಮುಂದಾಗಿದ್ದು, ಸೋಮವಾರ ರಾತ್ರಿ ಈ ಪ್ರಕ್ರಿಯೆ ಶುರುವಾಗಲಿದೆ ಎಂದು ಅಪೋಲೋ‌ ಆಸ್ಪತ್ರೆಯ ನರರೋಗ ತಜ್ಞ ಡಾ.ಅರುಣ್ ನಾಯ್ಕ್ ಹೇಳಿದ್ದಾರೆ.
ಸಂಚಾರಿ ವಿಜಯ್ ಅವರ ದೇಹದಿಂದ ಯಕೃತ್ (ಲಿವರ್), ಮೂತ್ರಪಿಂಡ (ಕಿಡ್ನಿ) ಮತ್ತು ಕಣ್ಣನ್ನು ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
ಈ ಅಂಗಾಂಗ ದಾನ ಪ್ರಕ್ರಿಯೆ ಮೆಡಿಕೋ ಲೀಗಲ್ ಮೂಲಕ ನಡೆಯಲಿದೆ. ಇದಾದ ಬಳಿಕ ನಾಳೆ ಬೆಳಗ್ಗೆ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಗೆಳೆಯ ನವೀನ್ ಜತೆ ಸಂಚಾರಿ ವಿಜಯ್ ಅವರು ಶನಿವಾರ ರಾತ್ರಿ ಬೈಕ್ನಲ್ಲಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿತ್ತು. ಜೆಪಿ ನಗರ 7ನೇ ಹಂತದಲ್ಲಿ ಅಪಘಾತ ಸಂಭವಿಸಿದ್ದು, ನವೀನ್ ಅವರಿಗೂ ತೀವ್ರ ಗಾಯಗಳಾಗಿವೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಲಾಕ್ ಡೌನ್ ಸಡಿಲಿಕೆ : ಮೊದಲ ದಿನವೇ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಜಲ ಆಯೋಗದ ಅಧ್ಯಕ್ಷರಾಗಿ ಚಂದ್ರಶೇಖರ್ ಅಯ್ಯರ್

newsics.com ನವದೆಹಲಿ: ಜಲ ತಜ್ಞ ಚಂದ್ರಶೇಖರ್ ಅಯ್ಯರ್ ಅವರು ‘ಕೇಂದ್ರ ಜಲ ಆಯೋಗದ’  ಮುಂದಿನ ಅಧ್ಯಕ್ಷರಾಗಿ ನಿಯುಕ್ತಿಯಾಗಿದ್ದಾರೆ. ಗುರುವಾರ ಡಿಸೆಂಬರ್ 1 ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಚಂದ್ರಶೇಖರ್...

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನ ಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...
- Advertisement -
error: Content is protected !!