ನಟ ಶರಣ್ ಅಸ್ವಸ್ಥ; ಆಸ್ಪತ್ರೆಗೆ ದಾಖಲು

newsics.comಬೆಂಗಳೂರು: ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಸ್ಯಾಂಡಲ್‍ವುಡ್ ನಟ ಶರಣ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಶರಣ್ ಅವರು ಶನಿವಾರ ಅವತಾರ ಪುರುಷ ಸಿನಿಮಾದ ಶೂಟಿಂಗ್ ವೇಳೆಯಲ್ಲಿ ಅಸ್ವಸ್ಥರಾದರು. ತಕ್ಷಣ ಅವರನ್ನು ನಗರದ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಮೂಲಗಳು ತಿಳಿಸಿವೆ.ಬೆಂಗಳೂರಿನಲ್ಲಿರುವ ಹೆಚ್ ಎಂಟಿ ಗ್ರೌಂಡ್ ನಲ್ಲಿ ಅವತಾರ ಪುರುಷ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ಶರಣ್ ಅವರಿಗೆ ತೀವ್ರವಾದ ಹೊಟ್ಟೆನೋವು ಕಾಣಿಸಿಕೊಂಡಿದೆ ಎನ್ನಲಾಗಿದ್ದು, ತಕ್ಷಣವೇ ಅವರನ್ನು ನಿರ್ದೇಶಕ ಸಿಂಪಲ್ ಸುನಿ ನತ್ತು ನಿರ್ಮಾಪಕರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.