ಬೆಂಗಳೂರು: ಕೊರೋನಾ ಹೊರತಾದ ರೋಗದಿಂದ ಬಳಲುತ್ತಿದ್ದ ತಮ್ಮ ಕುಟುಂಬದ ಸದಸ್ಯರಿಗೆ ಚಿಕಿತ್ಸೆ ನೀಡಲು ಬೆಂಗಳೂರಿನ ಖಾಸಗಿ ಆಸ್ಪತ್ರೆ ಮೀನಾ ಮೇಷ ಎಣಿಸಿತ್ತು ಎಂದು ನಟಿ ಸುಧಾರಾಣಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವು ಬಾರಿ ಮನವಿ ಮಾಡಿದ್ದರೂ ಕಾರ್ಪೋರೇಟ್ ಆಸ್ಪತ್ರೆಯೊಂದು ಸೂಕ್ತವಾಗಿ ಸ್ಪಂದಿಸಿಲ್ಲ ಎಂದು ಅವರು ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ. ಎಲ್ಲರೂ ರೋಗದಿಂದ ಬಳಲುವ ಸಂದರ್ಭ ಬರುತ್ತದೆ. ಇಂತಹ ಸಂದರ್ಭದಲ್ಲಿ ಚಿಕಿತ್ಸೆ ನಿರಾಕರಿಸುವುದು ಯಾವ ನ್ಯಾಯ ಎಂದು ಸುಧಾರಾಣಿ ಪ್ರಶ್ನಿಸಿದ್ದಾರೆ.
ಈ ಕುರಿತು ವೈದ್ಯಕೀಯ ಸಚಿವ ಕೆ. ಸುಧಾಕರ್ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಯಾರಿಗೂ ಕೂಡ ಚಿಕಿತ್ಸೆ ನಿರಾಕರಿಸಬಾರದು ಎಂದು ಸುಧಾಕರ್ ಹೇಳಿದ್ದಾರೆ. ಚಿಕಿತ್ಸೆ ನಿರಾಕರಿಸಿದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ