Monday, September 27, 2021

ಪೊಲೀಸ್ ವಶದಲ್ಲಿದ್ದ ಆಫ್ರಿಕನ್ ಪ್ರಜೆ ಸಾವು: ವಿದೇಶಿಗರ ಪ್ರತಿಭಟನೆ, ಲಾಠಿ ಚಾರ್ಜ್

Follow Us

newsics.com
ಬೆಂಗಳೂರು: ಡ್ರಗ್ಸ್ ಕೇಸ್ ನಲ್ಲಿ ಪೊಲೀಸರ ವಶದಲ್ಲಿದ್ದ ಆಫ್ರಿಕನ್ ಪ್ರಜೆಯೊಬ್ಬ ಮೃತಪಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರೇ ಆತನನ್ನು ಕೊಂದಿದ್ದಾರೆ ಎಂದು ನಗರದ  ಜೆ. ಸಿ ನಗರ ಪೊಲೀಸ್ ಠಾಣೆಮುಂದೆ ಆಫ್ರಿಕನ್ ಪ್ರಜೆಗಳು ಪ್ರತಿಭಟನೆ ನಡೆಸಿದ್ದು, ಪೊಲೀಸರ ಮೇಲೆಯೇ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆ ನಡೆದಿದೆ.
ಡ್ರಗ್ ಪೆಡ್ಲಿಂಗ್  ನಡೆಸುತ್ತಿದ ಎನ್ನುವ ಆರೋಪದ ಮೇಲೆ   ಜೊಯಲ್ ಮಲು ಎನ್ನುವ ವಿದೇಶಿ ಪ್ರಜೆಯನ್ನು ಪೊಲೀಸರು ಬಂಧಿಸಿದ್ದರು.  ಆತ ಶೀತ, ತಲೆನೋವು ಎಂದು ಹೇಳಿದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ  ಜೋಯೆಲ್ ಮೃತಪಟ್ಟಿದ್ದಾನೆ.  ಸಾವಿಗೆ ನಿಖರ ಕಾರಣ ಮರಣೋತ್ತರ ಪರೀಕ್ಷೆಯ ನಂತರವಷ್ಟೇ ತಿಳಿದುಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಫ್ರಿಕನ್ ಪ್ರಜೆಗಳು ಮಾತ್ರ ತಮ್ಮವನ ಸಾವಿಗೆ ಪೊಲೀಸರೇ ಕಾರಣ ಎಂದು ಪ್ರತಿಭಟನೆ ನಡೆಸುತ್ತಿದ್ದು ಪೊಲೀಸ್ ಠಾಣೆ ಎದುರು ಪರಿಸ್ಥಿತಿ ಪ್ರಕ್ಷುಬ್ಧಗೊಂಡಿದೆ.

 

ಕೃಷ್ಣಾ ನದಿ ನೀರು ಹಂಚಿಕೆ ವಿವಾದ: ತಾವು ವಿಚಾರಣೆ ನಡೆಸುವುದಿಲ್ಲವೆಂದ ಸುಪ್ರೀಂ ಕೋರ್ಟ್ ಸಿಜೆಐ

ಮತ್ತಷ್ಟು ಸುದ್ದಿಗಳು

Latest News

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

newsics.com ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್...

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

newsics.com ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು. ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45...

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

newsics.com ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್...
- Advertisement -
error: Content is protected !!