Saturday, April 17, 2021

ಜುಲೈ ಅಂತ್ಯಕ್ಕೆ ಕೃಷಿ ವಿವಿ ಪದವಿ ಫಲಿತಾಂಶ

ಬೆಂಗಳೂರು: ಜುಲೈ ಅಂತ್ಯಕ್ಕೆ ಕೃಷಿ ವಿಶ್ವವಿದ್ಯಾಲಯದ ಎಲ್ಲಾ ಪದವಿ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗಲಿದೆ.
ಕೃಷಿ ಸಚಿವ ಬಿ.ಸಿ.ಪಾಟೀಲ್ ಈ ಮಾಹಿತಿ ನೀಡಿದ್ದು, ಬಿ.ಎಸ್ಸಿ ಅಗ್ರಿಕಲ್ಚರ್ ಹಾಗೂ ಬಿ.ಟೆಕ್ ಎಂಜಿನಿಯರಿಂಗ್ ಸೇರಿದಂತೆ ಎಲ್ಲಾ ಪದವಿ ಪರೀಕ್ಷೆಗಳು ಜುಲೈ 8ರಂದು ಆನ್‌ಲೈನ್‌ ಮೂಲಕ ಮುಕ್ತಾಯಗೊಂಡಿವೆ. ಈ ತಿಂಗಳಾಂತ್ಯಕ್ಕೆ ಅಂಕಪಟ್ಟಿ ಮತ್ತು ಪದವಿ ಪ್ರಮಾಣಪತ್ರ ನೀಡಲಾಗುವುದು ಎಂದರು.
ಜುಲೈ15ರೊಳಗೆ ಗ್ರೇಡ್ ಅಂತಿಮಗೊಳಿಸಿ ಪರೀಕ್ಷಾ ಘಟಕಕ್ಕೆ ಸಲ್ಲಿಸಬೇಕಿದ್ದು, ಸಂಭಾವ್ಯ ಪದವಿ ಪ್ರಮಾಣಪತ್ರ ಮತ್ತು ಅಂಕಪಟ್ಟಿ ಸಲ್ಲಿಕೆ 15ರ ಬಳಿಕ ಆರಂಭವಾಗಲಿದೆ ಎಂದು ಅವರು ತಿಳಿಸಿದರು.
‘ಅಂತಿಮ ವರ್ಷದ ಎಂಎಸ್ಸಿ ಹಾಗೂ ಪಿಎಚ್‌.ಡಿ ಪದವಿ ವಿದ್ಯಾರ್ಥಿಗಳು ತಮ್ಮ ಸಂಶೋಧನಾ ಪ್ರಬಂಧಗಳನ್ನು ಆಗಸ್ಟ್ 31ರೊಳಗೆ ಸಲ್ಲಿಸಬೇಕು. ಸೆಪ್ಟೆಂಬರ್ 15ರಿಂದ ಪ್ರಮಾಣಪತ್ರ ಸಲ್ಲಿಕೆ ಆರಂಭವಾಗಲಿದೆ ಎಂದು ಹೇಳಿದರು.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!