Tuesday, April 13, 2021

ಅಂಬೇಡ್ಕರ್ ಟೆಕ್ನಿಕಲ್ ಕಾಲೇಜಿನ ಡೀನ್ ಕೊರೋನಾಗೆ ಬಲಿ

ಬೆಂಗಳೂರು: ನಗರದ ಅಂಬೇಡ್ಕರ್ ತಾಂತ್ರಿಕ ಕಾಲೇಜಿನ 55 ವರ್ಷದ ಡೀನ್ ಕೊರೋನಾಗೆ ಬಲಿಯಾಗಿದ್ದಾರೆ. ಮೃತರ ಪತ್ನಿಗೂ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಅವರನ್ನು ಇಎಸ್ಐ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನ ಮಲ್ಲತಹಳ್ಳಿಯಲ್ಲಿರುವ ಅಂಬೇಡ್ಕರ್ ತಾಂತ್ರಿಕ ಕಾಲೇಜಿನ ಡೀನ್ ಕಳೆದ ಕೆಲ ದಿನಗಳಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು. ಅವರನ್ನು ನಗರದ ಸೇಂಟ್ ಜಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡೀನ್ ಅವರು ಇತರ ಆರೋಗ್ಯ ಸಮಸ್ಯೆಯಿಂದಲೂ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಡೀನ್ ಅವರ ಮೃತದೇಹವನ್ನು ಸಂಬಂಧಿಗಳಿಗೆ ನೀಡದೆ ಕೊರೋನಾ ಮಾರ್ಗಸೂಚಿಯಂತೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. ಡೀನ್ ಅವರಿಗೆ ಇಬ್ಬರು ಮಕ್ಕಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!