Saturday, April 17, 2021

ವೃದ್ಧ ದಂಪತಿ ಹತ್ಯೆ, ಮಗ ನಾಪತ್ತೆ

ಬೆಂಗಳೂರು: ವೃದ್ಧ ದಂಪತಿಯ ಬಾಯಿಗೆ ಬಟ್ಟೆ ತುರುಕಿ ಹತ್ಯೆಗೈದಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಕಾವೇರಿನಗರದಲ್ಲಿ ನಡೆದಿದೆ. ಮಹದೇಶ್ವರ ದೇವಾಲಯದ ಬಳಿ ವಾಸವಿದ್ದ ಮೈಸೂರು ಮೂಲದ ಮದುವೆ ಬ್ರೋಕರ್ ನರಸಿಂಹ್ ರಾಜು(65) ಹಾಗೂ ಅವರ ಪತ್ನಿ ಶಿಕ್ಷಕಿ ಸರಸ್ವತಿ(64) ಹತ್ಯೆಯಾದ ವೃದ್ಧ ದಂಪತಿ.
ದಂಪತಿಯ ಹತ್ಯೆ ಮಂಗಳವಾರ ನಡೆದಿರಬೇಕೆಂದು ಶಂಕಿಸಲಾಗಿದ್ದು, ತಂದೆ-ತಾಯಿ ಹತ್ಯೆ ಬಳಿಕ ಅವರ ಪುತ್ರ ಸಂತೋಷ ಎಂಬಾತ ನಾಪತ್ತೆಯಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ.
ಪುತ್ರ ಸಂತೋಷ್ ಆಡಿಟರ್ ಆಗಿದ್ದು ಸ್ವಂತ ಆಫೀಸ್ ಹೊಂದಿದ್ದ ಎನ್ನಲಾಗಿದೆ. ಮಂಗಳವಾರ ಹೆತ್ತವರ ಜತೆ ಸಂತೋಷ ಜಗಳವಾಡಿದ್ದು ಮಂಗಳವಾರ ರಾತ್ರಿ ವೃದ್ಧ ದಂಪತಿ ಹತ್ಯೆ ನಡೆದಿದೆ.
ಬುಧವಾರ ಮನೆಕೆಲಸದಾಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಕಾಮಾಕ್ಷಿಪಾಳ್ಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!