ಅಯೋಧ್ಯಾ: ರಾಮ ಜನ್ಮಭೂಮಿ ಅಯೋಧ್ಯಾದಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ ಭೂಮಿಪೂಜೆಗೆ ಕರ್ನಾಟಕದಿಂದ 8 ಗಣ್ಯರನ್ನು ಆಹ್ವಾನಿಸಲಾಗಿದೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ,ಶ್ರೀರಾಮ ಜನ್ಮಭೂಮಿ ಟ್ರಸ್ಟ್ ನ ಟ್ರಸ್ಟಿ ಪೇಜಾವರಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಇಸ್ಕಾನ್ ದೇವಾಲಯದ ಮಧು ಪಂಡಿತ್ ದಾಸ್, ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮೀಜಿ, ಶೃಂಗೇರಿ ಮಠದ ವಿಧುಶೇಖರ ಭಾರತೀ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಶ್ರೀಗಳು, ಆರ್ಟ್ ಆಫ್ ಲಿವಿಂಗ್ ನ ರವಿಶಂಕರ್ ಗುರೂಜಿ ಸೇರಿದಂತೆ 8 ಗಣ್ಯರಿಗೆ ರಾಮಜನ್ಮಭೂಮಿ ಟ್ರಸ್ಟ್ ಆಹ್ವಾನ ಪತ್ರಿಕೆ ರವಾನಿಸಿದೆ.
ಆದರೆ ಕೊರೋನಾ ಭೀತಿಯ ಹಿನ್ನೆಲೆಯಲ್ಲಿ ಬಹುತೇಕ ಗಣ್ಯರು ಇಲ್ಲಿಂದಲೇ ಶುಭ ಹಾರೈಸಿದ್ದು, ಇನ್ನೊಮ್ಮೆ ಭೇಟಿ ನೀಡುವ ಭರವಸೆ ನೀಡಿದ್ದಾರೆ. ಕೊರೋನಾ ಭೀತಿಯ ಹಿನ್ನೆಲೆಯಲ್ಲಿ ರಾಮಜನ್ಮಭೂಮಿ ಟ್ರಸ್ಟ್ ಸರಳವಾಗಿ ಕಾರ್ಯಕ್ರಮ ಆಯೋಜಿಸಿದ್ದು, ಕೇವಲ 200ರಷ್ಟು ಗಣ್ಯರು ಸಾಮಾಜಿಕ ಅಂತರದೊಂದಿಗೆ ಶಿಲಾನ್ಯಾಸ ಸಮಾರಂಭದಲ್ಲಿ ಪಾಲ್ಗೊಳ್ಳುವ ನೀರಿಕ್ಷೆ ಇದೆ.
ರಾಮಮಂದಿರ ಭೂಮಿಪೂಜೆಗೆ ರಾಜ್ಯದ 8 ಗಣ್ಯರಿಗೆ ಆಹ್ವಾನ
Follow Us