newsics.com
ಬೆಂಗಳೂರು: ಕಳೆದ ಎಂಟು ದಿನಗಳಿಂದ ಅಂಗನವಾಡಿ ನೌಕರರು ನಡೆಸುತ್ತಿದ್ದ ಪ್ರತಿಭಟನೆ ಕೊನೆಗೊಂಡಿದೆ. ಗ್ರ್ಯಾಚುವಿಟಿ ಸೇರಿದಂತೆ ನೌಕರರ ಹಲವು ಬೇಡಿಕೆ ಈಡೇರಿಸಲು ಸರ್ಕಾರ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈ ಬಿಡಲಾಗಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಬಂದಿದ್ದ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಸಿಐಟಿಯು ನೇತೃತ್ವದಲ್ಲಿ ಈ ಮುಷ್ಕರ ಹಮ್ಮಿಕೊಳ್ಳಲಾಗಿತ್ತು. ಸಚಿವ ಹಾಲಪ್ಪ ಆಚಾರ್ ಅವರು ಪ್ರತಿಭಟನಾ ನಿರತರ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಅಂಗನವಾಡಿ ಕಾರ್ಯಕರ್ತೆಯರು ಹೇಳಿದ್ದಾರೆ.