ಬೆಂಗಳೂರು: ಮಾದಕ ದ್ರವ್ಯ ಜಾಲದ ನಂಟಿನ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ದ ಕೇಳಿ ಬಂದಿರುವ ಆರೋಪಗಳಿಂದ ಮನನೊಂದು ಖ್ಯಾತ ಆ್ಯಂಕರ್ ಅನುಶ್ರೀ ಇಂದು ಕಣ್ಣೀರು ಹಾಕಿದ್ದಾರೆ. ಫೇಸ್ ಬುಕ್ ನಲ್ಲಿ ಮಾತನಾಡುತ್ತ ತಮ್ಮ ಮೇಲಿನ ಎಲ್ಲ ಆರೋಪಗಳನ್ನು ಅವರು ನಿರಾಕರಿಸಿದರು. ಈ ಸಂದರ್ಭದಲ್ಲಿ ಕಣ್ಣೀರು ಹಾಕುತ್ತಾ ಎಲ್ಲ ಆರೋಪಗಳನ್ನು ತಳ್ಳಿಹಾಕಿದರು. ಈ ಆರೋಪಗಳಿಂದ ಬಹಳಷ್ಟು ನೋವಾಗಿದೆ ಎಂದು ಅವರು ಹೇಳಿದರು.
ಬಳಿಕ ಸುದ್ದಿ ಸಂಸ್ಥೆಯೊಂದರ ಜತೆ ಮಾತನಾಡಿದ ಅನು ಶ್ರೀ ಬೆಂಗಳೂರು ಮತ್ತು ಮಂಗಳೂರಿನಲ್ಲಿ ನಡೆದ ಯಾವುದೇ ಪಾರ್ಟಿಗಳಲ್ಲಿ ನಾನು ಭಾಗವಹಿಸಿಲ್ಲ ಎಂದು ಹೇಳಿದರು.
ಇದೇ ವೇಳೆ ಮಂಡ್ಯಕ್ಕೆ ಭೇಟಿ ನೀಡಿದ್ದ ಅನುಶ್ರೀ ನಿಮಿಷಾಂಭ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ