newsics.com
ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಈ ಬಾರಿ ದಾಖಲೆ ಮಟ್ಟದಲ್ಲಿ ಅರ್ಜಿಗಳು ಸಲ್ಲಿಕೆಯಾಗಿವೆ.
ಇದೇ ಮೊದಲ ಬಾರಿ ಆನ್’ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದರಿಂದ ಜನರ ಸ್ಪಂದನೆ ಹೆಚ್ಚಾಗಿದೆ. ಈವರೆಗೆ 28.857 ಜನರು ಆನ್ ಲೈನ್ ಮೂಲಕ ಪ್ರಶಸ್ತಿಗೆ ಶಿಫಾರಸ್ಸು ಮಾಡಿದ್ದಾರೆ ಎಂದು ಕನ್ನಡ ಸಂಸ್ಕೃತಿ ಸಚಿವ ಸುನಿಲ್ಕುಮಾರ್ ತಿಳಿಸಿದ್ದಾರೆ.
ಸೇವಾಸಿಂಧು ಮೂಲಕ ಸಾಧಕರನ್ನು ಗುರುತಿಸುವ ಅವಕಾಶಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದ್ದು, 2021-22 ನೇ ಸಾಲಿನ 66ನೇ ರಾಜ್ಯೋತ್ಸವ ಪ್ರಶಸ್ತಿಗಾಗಿ 6210 ಅರ್ಜಿಗಳು ಸಲ್ಲಿಕೆಯಾಗಿವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೇಂದ್ರ ಕಚೇರಿಗೆ ಭೌತಿಕವಾಗಿ 1450 ಅರ್ಜಿಗಳು ಹಾಗೂ ‘ಸೇವಾ ಸಿಂಧು’ ಮೂಲಕ 4770 ಹೆಸರುಗಳನ್ನು ಶಿಫಾರಸು ಮಾಡಲಾಗಿದೆ.
ಕೇರಳದಲ್ಲಿ ಭಾರೀ ಮಳೆ, ಹಲವೆಡೆ ಪ್ರವಾಹ, ಜನಜೀವನ ಅಸ್ತವ್ಯಸ್ತ, ಜನರ ಪರದಾಟ