Wednesday, May 25, 2022

ಹೆರಾಯಿನ್ ಮಾರುತ್ತಿದ್ದ ಇಬ್ಬರು ಪೆಡ್ಲರ್’ಗಳ ಬಂಧನ

Follow Us

newsics.com
ಬೆಂಗಳೂರು: ಹೆರಾಯಿನ್ ಮಾರಾಟ ಮಾಡುತ್ತಿದ್ದ ಇಬ್ಬರು ಪೆಡ್ಲರ್’ಗಳನ್ನು ಶಿವಾಜಿನಗರ ಠಾಣೆ ಪೊಲೀಸರು ಬಂಸಿದ್ದಾರೆ.
ಶಿವಾಜಿನಗರದ ಮೊಹಮ್ಮದ್ ಸಿಕಂದರ್(27), ಬ್ರಾಡ್‍ವೇ ರಸ್ತೆ ವಾಸಿ ಮುಜಾಯಿದ್ ಪಾಷ, ಅಲಿಯಾಸ್ ಫರ್ದಿನ್ ಪಾಷ(21) ಬಂಧಿತ ಆರೋಪಿಗಳು. ಆರೋಪಿಗಳಾದ ಮೊಹಮ್ಮದ್ ಸಿಕಂದರ್ ಮತ್ತು ಮುಜಾಯಿದ್ ಪಾಷ ವೆಲ್ಡಿಂಗ್ ಮತ್ತು ಡ್ರೈವಿಂಗ್ ಕೆಲಸ ಮಾಡುತ್ತಿದ್ದು, ಮಾದಕ ವಸ್ತುಗಳ ಸೇವನೆ ಹವ್ಯಾಸ ಬೆಳೆಸಿಕೊಂಡಿದ್ದಾಗಿ ವಿಚಾರಣೆ ವೇಳೆ ತಿಳಿಸಿದ್ದಾರೆ.

ಡ್ರಗ್ಸ್ ಜಾಲದ ನಂಟು ಆರೋಪ: ಕಣ್ಣೀರಿಟ್ಟ ಅನುಶ್ರೀ

ಹಣಕಾಸು ತೊಂದರೆ ಉಂಟಾಗಿದ್ದರಿಂದ ಮಾದಕ ವಸ್ತುಗಳನ್ನು ಮಾರಾಟ ಮಾಡಿ ಹೆಚ್ಚಿನ ಹಣ ಸಂಪಾದನೆ ಮಾಡಲು ಮುಂಬೈಗೆ ಹೋಗಿ ಮಾದಕ ವಸ್ತುಗಳನ್ನು ಖರೀದಿಸಿ ತಂದು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರೆಂದು ವಿಚಾರಣೆ ವೇಳೆ ಗೊತ್ತಾಗಿದೆ. ಶಿವಾಜಿನಗರ ಠಾಣೆ ವ್ಯಾಪ್ತಿಯ ತಿಮ್ಮಯ್ಯ ರಸ್ತೆಯಲ್ಲಿರುವ ಸರ್ಕಾರಿ ಉರ್ದು ಶಾಲೆ ಬಳಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಿದ ಶಿವಾಜಿನಗರ ಠಾಣೆ ಪೊಲೀಸರು ಈ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಂದ 80 ಸಾವಿರ ರೂ. ಬೆಲೆಯ 26.55 ಗ್ರಾಂ ತೂಕದ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ.

ಆಂಕರ್ ಅನುಶ್ರೀಗೆ ಸಮನ್ಸ್ ನೀಡಿದ್ದ ಇನ್ಸ್’ಪೆಕ್ಟರ್ ವರ್ಗ

ಡ್ರಗ್ಸ್ ಕೇಸ್ ಆರೋಪಿ ವಿರೇನ್ ಖನ್ನಾಗೆ ಪಾಲಿಗ್ರಾಫ್ ಟೆಸ್ಟ್ ಶೀಘ್ರ

ಮತ್ತಷ್ಟು ಸುದ್ದಿಗಳು

Latest News

ರಾಜಸ್ಥಾನ ತಂಡವನ್ನು ಮಣಿಸಿ ಫೈನಲ್ಸ್ ಗೆ ಎಂಟ್ರಿಕೊಟ್ಟ ಗುಜರಾತ್

newsics.com ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಐಪಿಎಲ್ 2022ರ ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು 7 ವಿಕೆಟ್‌ಗಳಿಂದ ಭರ್ಜರಿ ಜಯ ಸಾಧಿಸಿ ಫೈನಲ್ಸ್...

ಬಸ್ ನಿಲ್ದಾಣದಲ್ಲಿ ಮಗು ಸಿಕ್ಕ ಪ್ರಕರಣಕ್ಕೆ ಟ್ವಿಸ್ಟ್ : ತನಿಖೆಯಲ್ಲಿ ಬಯಲಾಯ್ತು ಅಕ್ರಮ ಸಂಬಂಧದ ಅಸಲಿಯತ್ತು

newsics.com ಮೈಸೂರು: ಕಳೆದ 15 ದಿನಗಳ ಹಿಂದೆ ರಾಯಚೂರಿನ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಯುವಕನ ಕೈಗೆ ಮಗುವನ್ನು ಕೊಟ್ಟು ಪರಾರಿಯಾದ ಪ್ರಕರಣ ಇದೀಗ ಹೊಸ ತಿರುವನ್ನೇ ಪಡೆದುಕೊಂಡಿದೆ. ಇದೀಗ ಆ ಮಗು ಆತನದ್ದೇ ಎಂದು...

ಪ್ರವಾಸಿಗರನ್ನು ಸ್ಕೂಬಾ ಡೈವಿಂಗ್ ಗೆ ಹೊತ್ತೊಯ್ದ ದೋಣಿ ಮುಳುಗಡೆ; ಇಬ್ಬರು ಸಾವು

newsics.com ಮಹಾರಾಷ್ಟ್ರ: ಸ್ಕೂಬಾ ಡೈವಿಂಗ್ ವೇಳೆ 20 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯು ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ನಡೆದಿದೆ. ಅಷ್ಟೇ ಅಲ್ಲದೇ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾರಾಷ್ಟ್ರದ...
- Advertisement -
error: Content is protected !!