newsics.com
ಸಚಿವ ಡಾ. ಸಿ.ಎನ್ ಅಶ್ವತ್ಥ ನಾರಾಯಣ ವಿಧಾನ ಪರಿಷತ್ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ವಿಚಾರದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿರುವುದು ಸಾಬೀತಾಗಿದ್ದು ಇವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಮಟ್ಟದ ನೀತಿ ಸಂಹಿತೆ ತಂಡದ ಮುಖ್ಯಸ್ಥರು ಹಾಗೂ ಪಂಚಾಯಿತಿ ಸಿಇಓ ಜಿಲ್ಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಿದ್ದಾರೆ.
ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಹಿಳಾ ಕಾಲೇಜು, ಮಾಂಡವ್ಯ ಸಮೂಹ ಸಂಸ್ಥೆ, ಪಿಇಎಸ್ ಕಾಲೇಜುಗಳಿಗೆ ಮೇ 15ರಂದು ಭೇಟಿ ನೀಡಿದ್ದ ಸಚಿವ ಅಶ್ವತ್ಥ ನಾರಾಯಣ ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಮೈ.ವಿ ರವಿಶಂಕರ್ ಪರ ಮತಯಾಚನೆ ಮಾಡಿ ನೀತಿ ಸಂಹಿತೆ ಉಲ್ಲಂಘಿಸಿದ್ದರು .