Saturday, April 17, 2021

ಬಂಗಾರಪೇಟೆ ತಹಸೀಲ್ದಾರ್ ಹತ್ಯೆ

ಕೋಲಾರ: ಭೂ ವಿವಾದಕ್ಕೆ ಸಂಬಂಧಿಸಿ ನಡೆದ ಘರ್ಷಣೆಯಲ್ಲಿ ಬಂಗಾರಪೇಟೆ ತಹಸೀಲ್ದಾರ್’ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬಂಗಾರಪೇಟೆಯ ತೊಪನಹಳ್ಳಿ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.
ಬಂಗಾರಪೇಟೆ ತಹಸೀಲ್ದಾರ್ ಬಿ.ಕೆ.ಚಂದ್ರಮೌಳೇಶ್ವರ (53) ಗೆ ಚಾಕುವಿನಿಂದ ಇರಿಯಲಾಗಿದ್ದು ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. ಜಮೀನಿನ ಸರ್ವೆ ಸಂಬಂಧ ಉಂಟಾದ ಜಗಳವೇ ಈ ಘಟನೆಗೆ ಕಾರಣವೆಂದು ಮಾಹಿತಿ ತಿಳಿದುಬಂದಿದೆ,
ಕೋಲಾರ ಜಾಲಪ್ಪ ಆಸ್ಪತ್ರೆಯಲ್ಲಿ ತಹಸೀಲ್ದಾರ್ ಸಾವನ್ನಪ್ಪಿದ್ದಾರೆ. ದೊಡ್ಡಕಳವಂಚಿ ಗ್ರಾಮ ನಿವಾಸಿ, ನಿವೃತ್ತ ಶಿಕ್ಷಕ ವೆಂಕಟಪತಿ ಎಂಬಾತ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದ್ದು ಆರೋಪಿಯನ್ನು ಪೋಲೀಸರು ಬಂಧಿಸಿದ್ದಾರೆ.
ಬಂಗಾರಪೇಟೆ ತಾಲ್ಲೂಕಿನ ತೊಪ್ಪನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳವಂಚಿ ಗ್ರಾಮದ ರಾಮಮೂರ್ತಿ ಮತ್ತು ವೆಂಕಟಾಚಲಪತಿ ಎಂಬುವರ ನಡುವೆ ಸರ್ವೆ ನಂಬರ್‌ 5/4ರ ಜಮೀನಿನ ವಿಚಾರವಾಗಿ ವಿವಾದವಿತ್ತು. ಈ ಸಂಬಂಧ ರಾಮಮೂರ್ತಿ ತಹಸೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿ ಜಮೀನಿನ ಸರ್ವೆ ಮಾಡುವಂತೆ ಕೋರಿದ್ದರು.
ಹೀಗಾಗಿ ತಹಸೀಲ್ದಾರ್‌ ಚಂದ್ರಮೌಳೇಶ್ವರ ಸಿಬ್ಬಂದಿಯೊಂದಿಗೆ ಸರ್ವೆ ಮಾಡಲು ಕಳವಂಚಿ ಗ್ರಾಮದ ವಿವಾದಿತ ಜಮೀನಿಗೆ ಹೋಗಿದ್ದರು. ಸರ್ವೆ ಕಾರ್ಯಕ್ಕೆ ಅಡ್ಡಿಪಡಿಸಿದ ವೆಂಕಟಾಚಲಪತಿ ಅಧಿಕಾರಿಗಳ ಜತೆ ವಾಗ್ವಾದ ನಡೆಸಿದ್ದಾನೆ. ಅಲ್ಲದೇ, ಅರ್ಜಿದಾರರು ಮತ್ತು ಅಧಿಕಾರಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ವಿರೋಧದ ನಡುವೆಯೂ ಅಧಿಕಾರಿಗಳು ಪೊಲೀಸ್‌ ಭದ್ರತೆಯಲ್ಲಿ ಸರ್ವೆ ಕಾರ್ಯ ಪೂರ್ಣಗೊಳಿಸಿದರು.
ತಹಸೀಲ್ದಾರ್‌ ತಮ್ಮ ವಾಹನದ ಬಳಿ ಹೋಗಿ ಸ್ಥಳದಿಂದ ನಿರ್ಗಮಿಸುವ ವೇಳೆ ಜಮೀನಿನ ದಾಖಲೆಪತ್ರ ತೋರಿಸುವ ನೆಪದಲ್ಲಿ ವಾಹನದ ಬಳಿಗೆ ಹೋದ ವೆಂಕಟಾಚಲಪತಿ ದಾಖಲೆಪತ್ರಗಳ ಜತೆ ಪ್ಲಾಸ್ಟಿಕ್‌ ಕವರ್‌ನಲ್ಲಿ ಅಡಗಿಸಿ ಇಟ್ಟಿಕೊಂಡಿದ್ದ ಚಾಕು ಹೊರ ತೆಗೆದು ತಹಸೀಲ್ದಾರ್‌ ಎದೆಗೆ ಇರಿದು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ತೀವ್ರ ರಕ್ತಸ್ರಾವವಾಗಿ ಕುಸಿದು ಬಿದ್ದ ತಹಶೀಲ್ದಾರ್‌ರನ್ನು ಆಂಬುಲೆನ್ಸ್‌ನಲ್ಲಿ ಜಿಲ್ಲಾ ಕೇಂದ್ರದ ಜಾಲಪ್ಪ ಆಸ್ಪತ್ರೆಗೆ ಕರೆತರಲಾಯಿತು. ಆದರೆ, ಆ ವೇಳೆಗಾಗಲೇ ಅವರು ಕೊನೆಯುಸಿರೆಳೆದರು. ಕಾಮಸಮುದ್ರ ಠಾಣೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ಆತನ ಪತ್ತೆ ಕಾರ್ಯ ಆರಂಭಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...
- Advertisement -
error: Content is protected !!