Saturday, April 17, 2021

ಹುಚ್ಚ ವೆಂಕಟ್ ಮೇಲೆ ಹಲ್ಲೆ ಪ್ರಕರಣ: ಸ್ವಯಂ ಪ್ರೇರಿತ ದೂರು ದಾಖಲು

ಬೆಂಗಳೂರು; ಬಿಗ್ ಬಾಸ್ ಖ್ಯಾತಿಯ ನಟ ಹುಚ್ಚ ವೆಂಕಟ್ ಮೇಲೆ ಮಂಡ್ಯದಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಮಂಡ್ಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಿಸಲಾಗಿದೆ. ಇತ್ತೀಚೆಗೆ ಮಂಡ್ಯದಲ್ಲಿ ಕೆಲವು ಮಂದಿ ಹುಚ್ಚ ವೆಂಕಟ್ ಮೇಲೆ ಗಂಭೀರ ಹಲ್ಲೆ ನಡೆಸಿದ್ದರು. ಹುಚ್ಚ ವೆಂಕಟ್ ವರ್ತನೆಯಿಂದ ರೋಸಿ ಹೋದ ಅವರು ಈ ಕೃತ್ಯ  ಎಸಗಿದ್ದರು ಎಂದು ಹೇಳಲಾಗಿತ್ತು. ಇದೀಗ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂ  ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ನಡೆದಿದೆ. ವೆಂಕಟ್ ಮೇಲೆ ನಡೆದ ಹಲ್ಲೆಯನ್ನು ಚಿತ್ರನಟ ಜಗ್ಗೇಶ್ ಸೇರಿದಂತೆ ಹಲವು ಕಲಾವಿದರು ಖಂಡಿಸಿದ್ದರು.

http://134.209.153.225/actor-huchcha-venkat-attack-sandalwood-rediscovers/

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!