Wednesday, July 6, 2022

ಬೆಂಗಳೂರು ಪೊಲೀಸರ ಮೇಲೆ ಹಲ್ಲೆ, ಗಾಳಿಯಲ್ಲಿ ಗುಂಡು

Follow Us

ಕೋಲಾರ: ಕೊಲೆ ಪ್ರಕರಣವೊಂದರ ಆರೋಪಿಗಳು ಬೆಂಗಳೂರಿನ ಮಫ್ತಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಈ ಘಟನೆ ಕೋಲಾರದ ಅರಹಳ್ಳಿ ಗೇಟ್ ಬಳಿ ಶುಕ್ರವಾರ ರಾತ್ರಿ ನಡೆದಿದ್ದು, ಬೆಂಗಳೂರು ಕೆ.ಜಿ ಹಳ್ಳಿಯಲ್ಲಿ ನಡೆದ ಕೊಲೆ ಕೇಸಿಗೆ ಸಂಬಂಧಿಸಿದ ಆರೋಪಿಗಳು ಈ ಹಲ್ಲೆ ನಡೆಸಿದ್ದಾರೆ.
ಬೆಂಗಳೂರಿನಿಂದ ಮಫ್ತಿಯಲ್ಲಿ ಆರೋಪಿಗಳನ್ನು ಹಿಂಬಾಲಿಸಿಕೊಂಡು ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸರು ಹೋಗಿದ್ದರು. ಪೊಲೀಸರು ತಮ್ಮನ್ನು ಹಿಂಬಾಲಿಸುತ್ತಿದ್ದಾರೆ ಎಂಬುದನ್ನು ಗಮನಿಸಿ ಇಬ್ಬರು ಆರೋಪಿಗಳು ತಮ್ಮ ಬಳಿ ಇದ್ದ ಲಾಂಗ್’ನಿಂದ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಪೋಲಿಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಅದೇ ವೇಳೆ ಆರೋಪಿಗಳು ಪೊಲೀಸರು ಬಂದ ಕಾರಿನ ಮೇಲೆ ಕಲ್ಲಿನಿಂದ ಹೊಡೆದು ಕಾರನ್ನು ಜಖಂಗೊಳಿಸಿ ಪರಾರಿಯಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ, ...

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ. ಸಾಫ್ಟವೇರ್ ಡೆವಲಪರ್ ಆಗಿರುವ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...
- Advertisement -
error: Content is protected !!