Monday, April 12, 2021

ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯಗೆ ಷರತ್ತುಬದ್ಧ ಜಾಮೀನು

ಬೆಂಗಳೂರು: ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಬಂಧನಕ್ಕೊಳಗಾಗಿದ್ದ ಅಮೂಲ್ಯ ಲಿಯೋನಾಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಅಮೂಲ್ಯ ಲಿಯೋನ್‍ಗೆ ನಗರದ ಸಿಟಿ ಸಿವಿಲ್ ಕೋರ್ಟ್ ಗುರುವಾರ ರಾತ್ರಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಅರ್ಜಿದಾರರ ಪರ ವಾದಿಸಿದ ವಕೀಲರು, ಅಮೂಲ್ಯ ಇನ್ನೂ 19 ವರ್ಷದ ಯುವತಿ. ನಗರದ ಖಾಸಗಿ ಕಾಲೇಜೊಂದರಲ್ಲಿ ಓದುತ್ತಿದ್ದಾರೆ. ಅವರು ಪಾಕಿಸ್ತಾನ ಜಿಂದಾಬಾದ್ ಎಂದಷ್ಟೇ ಕೂಗಿದ್ದಾರೆ. ಪಾಕಿಸ್ತಾನವನ್ನು ನಮ್ಮ ದೇಶ ಎಂದು ಎಲ್ಲಿಯೂ ಉಲ್ಲೇಖಿಸಿಲ್ಲ ಮತ್ತು ಘೋಷಣೆ ಮಾಡಿಲ್ಲ. ಹೀಗಾಗಿ, ಜಾಮೀನು ನೀಡಬೇಕೆಂದು ಮನವಿ ಮಾಡಿದರು.
ಫೆ.20ರಂದು ಕೆಲ ಸಂಘಟನೆಗಳು ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಗರದ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅಮೂಲ್ಯ ಲಿಯೋನ್ ವೇದಿಕೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಳು.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!